ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ನಾಗಲಕ್ಷ್ಮಿ ಎಂಬ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು.

ಬೆಂಗಳೂರು(ಸೆ.15): ಹಂತಕಿ ಸೈನೆಡ್​ ಮಲ್ಲಿಕಾಗೆ ಗಲ್ಲು ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ತೀರ್ಪು ನೀಡಿದೆ.

ನಾಗಲಕ್ಷ್ಮಿ ಎಂಬ ಮಹಿಳೆಯ ಕೊಲೆ, ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆದೇಶ ನೀಡಿದ ಉಚ್ಛ ನ್ಯಾಯಾಲಯ ಮರುವಿಚಾರಣೆ ನಡೆಸಲು ಅಧೀನ ನ್ಯಾಯಾಲಯ ಬೆಂಗಳೂರಿನ 1ನೇ ಸೆಷನ್ಸ್ ಕೋರ್ಟ್'ಗೆ ಸೂಚಿಸಿದೆ. 10 ವರ್ಷಗಳ ಹಿಂದೆ ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ನಾಗಲಕ್ಷ್ಮಿ ಎಂಬ ಮಹಿಳೆಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿತ್ತು.