ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದ್ದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೊಡಗಿನ ಕೆ.ಪಿ. ಮಂಜುನಾಥ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ. ಮುಖರ್ಜಿ ಹಾಗೂ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ಪೀಠ, ಈಗಾಗಲೇ ಟಿಪ್ಪು ಜಯಂತಿ ಮುಗಿದು ಹೋಗಿದ್ದು, ಅರ್ಜಿ ವಿಚಾರಣೆ ಮುಂದುವರಿಸುವ ಅಗತ್ಯವಿಲ್ಲವೆಂದು ಅಭಿಪ್ರಾಯಪಟ್ಟಿದೆ.

ಬೆಂಗಳೂರು: ಸರ್ಕಾರದ ವತಿಯಿಂದ ರಾಜ್ಯಾದ್ಯಂತ ನಡೆಯುವ ಟಿಪ್ಪು ಸುಲ್ತಾನ್‌ ಜಯಂತಿ ಆಚರಣೆಗೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್‌ ಸೋಮವಾರ ವಜಾ ಗೊಳಿಸಿದೆ.

ಟಿಪ್ಪು ಜಯಂತಿ ಆಚರಣೆಗೆ ಮುಂದಾಗಿದ್ದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೊಡಗಿನ ಕೆ.ಪಿ. ಮಂಜುನಾಥ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಕೆ. ಮುಖರ್ಜಿ ಹಾಗೂ ನ್ಯಾ. ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ಪೀಠ, ಈಗಾಗಲೇ ಟಿಪ್ಪು ಜಯಂತಿ ಮುಗಿದು ಹೋಗಿದ್ದು, ಅರ್ಜಿ ವಿಚಾರಣೆ ಮುಂದುವರಿಸುವ ಅಗತ್ಯವಿಲ್ಲವೆಂದು ಅಭಿಪ್ರಾಯಪಟ್ಟಿದೆ.

ಕಳೆದ ವರ್ಷ ನ.10ರಂದು ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಕೋಮು ಗಲಭೆ ಸಾಧ್ಯತೆ ಹಿನ್ನೆಲೆಯಲ್ಲಿ ಜಯಂತಿ ಆಚರಿಸದಂತೆ ನಿರ್ದೇಶಿಸಲು ಮಂಜುನಾಥ್‌ ಅರ್ಜಿ ಸಲ್ಲಿಸಿದ್ದರು.