ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ಬಾರಿ ಕಂಬಳ ನಡೆಯುವ ಬಗ್ಗೆ ಅನಿಶ್ಚಿತತೆ ಇದೆ ಎನ್ನಲಾಗುತ್ತಿತ್ತು. ಉಡುಪಿಯಲ್ಲಿ ಕಂಬಳ ನಡೆಸಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಾಗಿ ಹೇಳಿದ್ದರು.
ಬೆಂಗಳೂರು (ಅ.28): ಕರಾವಳಿಯ ಕೃಷಿ ಸಂಸ್ಕೃತಿಯ ಸಂಕೇತವಾದ ಕಂಬಳಕ್ಕೆ ಹೈಕೋರ್ಟ್ ಹಸಿರು ನಿಶಾನೆ ನೀಡಿದೆ.
ಜಿಲ್ಲಾಡಳಿತದ ನಿಯಂತ್ರಣದಲ್ಲಿ, ಹಿಂಸೆಯಿಲ್ಲದ ಕಂಬಳ ನಡೆಸಲು ಹೈಕೋರ್ಟ್ ನೀಡಿರುವ ಆದೇಶವನ್ನು ಕರಾವಳಿ ಜನ ಸ್ವಾಗತಿಸಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಈ ಬಾರಿ ಕಂಬಳ ನಡೆಯುವ ಬಗ್ಗೆ ಅನಿಶ್ಚಿತತೆ ಇದೆ ಎನ್ನಲಾಗುತ್ತಿತ್ತು. ಉಡುಪಿಯಲ್ಲಿ ಕಂಬಳ ನಡೆಸಲು ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಾಗಿ ಹೇಳಿದ್ದರು.
ಆದರೆ ಇಂದು ಹೈಕೋರ್ಟ್ ನೀಡಿರುವ ಆದೇಶ ಕಂಬಳ ಪ್ರೇಮಿಗಳ ಮೊಗದಲ್ಲಿ ಹರ್ಷ ತಂದಿದೆ.