ತನ್ನ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣ ಕುರಿತು ಎಸಿಬಿ ದಾಖಲಿಸಿದ್ದ ಎಫ್ಐಆರ್ ರದ್ದತಿ ಕೋರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೈಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯನ್ನು ಇಂದು ವಿಚಾರಣೆಗೆ ತೆಗೆದುಕೊಳ್ಳುವಂತೆ ಬಿಎಎಸ್ವೈ ಪರ ವಕೀಲರು ಹೈಕೋರ್ಟ್ಗೆ ಶನಿವಾರ ರಿಟ್ ಸಲ್ಲಿಕೆ ಜೊತೆಗೆ ಮೆಮೋ ಸಲ್ಲಿಸಿದ್ದರು.
ಬೆಂಗಳೂರು: ತನ್ನ ವಿರುದ್ಧ ಡಿನೋಟಿಫಿಕೇಶನ್ ಪ್ರಕರಣ ಕುರಿತು ಎಸಿಬಿ ದಾಖಲಿಸಿದ್ದ ಎಫ್ಐಆರ್ ರದ್ದತಿ ಕೋರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೈಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಅರ್ಜಿಯನ್ನು ಇಂದು ವಿಚಾರಣೆಗೆ ತೆಗೆದುಕೊಳ್ಳುವಂತೆ ಬಿಎಎಸ್ವೈ ಪರ ವಕೀಲರು ಹೈಕೋರ್ಟ್ಗೆ ಶನಿವಾರ ರಿಟ್ ಸಲ್ಲಿಕೆ ಜೊತೆಗೆ ಮೆಮೋ ಸಲ್ಲಿಸಿದ್ದರು. ಆದರೆ ಹೈಕೋರ್ಟ್ ಇಂದು ವಿಚಾರಣೆ ಕೈಗೆತ್ತಿಕೊಳ್ಳಲು ನಿರಾಕರಿಸಿದೆ.
ಪಟ್ಟಿಯಂತೆ ಪ್ರಕರಣದ ವಿಚಾರಣೆ ನಡೆಸುವುದಾಗಿ ನ್ಯಾಯಮೂರ್ತಿ ತಿಳಿಸಿದ್ದಾರೆ. ಹೀಗಾಗಿ ನಾಳೆ ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ.
