ವಿಚಾರಣೆ ವೇಳೆ ಸಿಬಿಐ ಪರ ವಕೀಲರು, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕಲಾವಾಕಾಶ ಕೋರಿ ನ್ಯಾಯಪೀಠಕ್ಕೆ ಮನವಿ ಮಾಡಿ​ದರು. ಈ ಹಿನ್ನೆಲೆಯಲ್ಲಿ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ಬೆಂಗಳೂರು(ಜ.26): ಆದಾಯ ತೆರಿಗೆ ಅಧಿಕಾರಿಗಳ ದಾಳಿ ವೇಳೆ 4.80 ಕೋಟಿ ರೂ. ಹೊಸ ನೋಟು ಪತ್ತೆಯಾದ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿದ್ದ ಇಬ್ರಾಹಿಂ ಷರೀಫ್‌ರನ್ನು ಬಂಧಿಸದಂತೆ ವಿಧಿಸಿದ್ದ ನಿರ್ಬಂಧವನ್ನು ಹೈಕೋರ್ಟ್‌ ವಿಸ್ತರಿಸಿದೆ. ತಮ್ಮ ವಿರುದ್ಧ ದಾಖಲಿಸಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಇಬ್ರಾಹಿಂ ಷರೀಫ್‌ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ ಆನಂದಬೈರಾರೆಡ್ಡಿ ಅವರಿದ್ದ ಏಕಸದಸ್ಯ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ ಸಿಬಿಐ ಪರ ವಕೀಲರು, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸಲು ಕಲಾವಾಕಾಶ ಕೋರಿ ನ್ಯಾಯಪೀಠಕ್ಕೆ ಮನವಿ ಮಾಡಿ​ದರು. ಈ ಹಿನ್ನೆಲೆಯಲ್ಲಿ ನ್ಯಾಯಪೀಠ ವಿಚಾರಣೆ ಮುಂದೂಡಿದೆ.
ಪ್ರಕರಣದಹಿನ್ನೆಲೆ: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ವೇಳೆ ಸಿಕ್ಕ ಕೋಟ್ಯಂತರ ರುಪಾಯಿ ಹೊಸ ನೋಟು ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ಅಧಿಕಾರಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಈ ದೂರಿನಲ್ಲಿ ಗುತ್ತಿಗೆದಾರ ಷರೀಫ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು.