ಎಸ್.ನಾರಾಯಣ ಅವರ ವಿರುದ್ಧ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿಗೊಳಿಸಿದ್ದ ವಾರೆಂಟ್‌ಗೆ  ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಬೆಂಗಳೂರು(ಸೆ.22): ಕನ್ನಡ ಚಿತ್ರವೊಂದರ ನಿರ್ಮಾಣಕ್ಕಾಗಿ ಹೂಡಿದ್ದ 50 ಲಕ್ಷ ಬಂಡವಾಳ ಹಣವನ್ನು ನಿರ್ಮಾಪಕರಿಗೆ ಮರು ಪಾವತಿ ಮಾಡದ ಆರೋಪ ಸಂಬಂಧ ನಟ ಹಾಗೂ ನಿರ್ದೇಶಕ ಎಸ್.ನಾರಾಯಣ ಅವರ ವಿರುದ್ಧ ನಗರದ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿಗೊಳಿಸಿದ್ದ ವಾರೆಂಟ್‌ಗೆ ಹೈಕೋರ್ಟ್ ಗುರುವಾರ ತಡೆಯಾಜ್ಞೆ ನೀಡಿದೆ.

ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾರಿ ಮಾಡಿದ್ದ ವಾರೆಂಟ್ ರದ್ದು ಕೋರಿ ಎಸ್.ನಾ ರಾಯಣ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ಪೀಠವು, ಸಮನ್ಸ್‌ಗೆ ತಡೆಯಾಜ್ಞೆ ನೀಡಿತು. ಅರ್ಜಿದಾರರ ಪರ ವಕೀಲ ಶಂಕರಪ್ಪ ವಾದ ಮಂಡಿಸಿದರು.