ಬ್ಯಾಲೆಟ್ ಮೂಲಕ ಚುನಾವಣೆ ನಡೆಸುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್’ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರು (ಡಿ.15): ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಸಂಬಂಧ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಹೆಚ್’ಡಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ನಮ್ಮ ಪಕ್ಷದ ನಿಲುವು ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ನಡೆಸುವುದಾಗಿದೆ. ಈ ಹಿಂದೆ ನಾನೂ ಚುನಾವಣಾ ಆಯೋಗಕ್ಕೆ 2 ಬಾರಿ ಪತ್ರ ಬರೆದಿದ್ದೆ. ಬ್ಯಾಲೆಟ್ ಪೇಪರ್ ಬಳಕೆಯ ಪದ್ಧತಿಯನ್ನು ಜಾರಿಗೆ ತರುವಂತೆ ಆಗ್ರಹಿಸಿದ್ದೆ. ಇವಿಎಂ ಯಂತ್ರದ ಹಿಂದೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿವೆ ಎಂದಿದ್ದಾರೆ.

ಆದರೆ ನಮ್ಮ ಪಕ್ಷ ಮಾತ್ರ ಬ್ಯಾಲೆಟ್ ಪೇಪರ್ ಬಳಕೆ ಪರವಿದೆ ಎಂದು ಹೇಳಿದ್ದಾರೆ. ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವುದೇ ಉತ್ತಮ ಎಂದು ದೇವೇಗೌಡ ಅವರು ಹೇಳಿದ್ದಾರೆ.