ಅನಾರೋಗ್ಯದಿಂದ ಬಳಲುತ್ತಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ಡಿ. ಕುಮಾರಸ್ವಾಮಿ, ಸಿಂಗಾಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರು(ಆ.11): ಅನಾರೋಗ್ಯದಿಂದ ಬಳಲುತ್ತಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌. ಡಿ. ಕುಮಾರಸ್ವಾಮಿ, ಸಿಂಗಾಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ.

ತೀವ್ರ ಕೆಮ್ಮು ಮತ್ತು ಕಫ‌ದ ಸಮಸ್ಯೆಯಿಂದ ಬಳಲುತ್ತಿದ್ದ ಕುಮಾರಸ್ವಾಮಿ ಧರ್ಮಸ್ಥಳದ ಉಜಿರೆಯಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫ‌ಲಕಾಣದ ಹಿನ್ನಲೆಯಲ್ಲಿ ಸಿಂಗಾಪುರಕ್ಕೆ ತೆರಳಿದ್ದಾರೆ ಅಂತ ಹೇಳಲಾಗ್ತಿದೆ.

ಉತ್ತರ ಕರ್ನಾಟಕ ಪ್ರವಾಸದ ವೇಳೆ ಅಭಿಮಾನಿಗಳು ಸಿಡಿಸಿದ ಪಟಾಕಿ ಹೊಗೆ ಸೇವನೆಯಿಂದ ಕೆಮ್ಮು ಮತ್ತು ಕಫ‌ ಸಮಸ್ಯೆ ಕಾಣಿಸಿಕೊಂಡಿದೆ. ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇಲ್ಲ ಎಂದು ಹೇಳಲಾಗಿದೆ. ಹತ್ತಿರದ ಸಂಬಂಧಿ, ಮೈಸೂರು ವಿವಿ ಮಾಜಿ ಕುಲಪತಿ ರಂಗಪ್ಪ ಅವರು ಕುಮಾರ ಸ್ವಾಮಿ ಅವರೊಂದಿಗೆ ಸಿಂಗಾಪುರಕ್ಕೆ ತೆರಳಿದ್ದು, ಭಾನುವಾರ ವಾಪಸಾಗುವ ಸಾಧ್ಯತೆ ಇದೆ.