Asianet Suvarna News Asianet Suvarna News

ನಿರ್ಮಲಾಗೆ ಸಿಎಂ ಕುಮಾರಸ್ವಾಮಿ ಫೋನ್

ಕೊಡಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಆದ ಅನನುಕೂಲಕ್ಕಾಗಿ ವಿಷಾದಿಸಿರುವ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಆಗಿರುವ ಭಿನ್ನಾಭಿಪ್ರಾಯವನ್ನು ಎಲ್ಲರೂ ಮರೆತು ತೊಂದರೆಗೆ ಒಳಗಾದ ಜನರಿಗೆ ಪುನರ್ ವಸತಿ ಕಲ್ಪಿಸುವುದು ತುರ್ತು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

HD Kumaraswamy Calls Nirmala Sitharaman Express Regrets
Author
Bengaluru, First Published Aug 27, 2018, 10:07 AM IST | Last Updated Sep 9, 2018, 9:19 PM IST

ಬೆಂಗಳೂರು: ಮಳೆಯಿಂದ ತೊಂದರೆಗೆ ಒಳಗಾದ ಕೊಡಗಿಗೆ ಭೇಟಿ ನೀಡಿದ ಸಂದರ್ಭದಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಆದ ಅನನುಕೂಲಕ್ಕಾಗಿ ವಿಷಾದಿಸಿರುವ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಆಗಿರುವ ಭಿನ್ನಾಭಿಪ್ರಾಯವನ್ನು ಎಲ್ಲರೂ ಮರೆತು ತೊಂದರೆಗೆ ಒಳಗಾದ ಜನರಿಗೆ ಪುನರ್ ವಸತಿ ಕಲ್ಪಿಸುವುದು ತುರ್ತು ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ಅತಿವೃಷ್ಟಿಯಿಂದ ತೊಂದರೆಗೆ ಸಿಲುಕಿರುವ ವರ ರಕ್ಷಣೆ ಹಾಗೂ ಪರಿಹಾರ ಕಾರ್ಯಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳು, ವಿಪತ್ತು ನಿರ್ವಹಣಾ ಸಂಸ್ಥೆಗಳು ಮತ್ತು ಸ್ವಯಂ ಸೇವಕರು ದಿನದ 24 ಗಂಟೆಯೂ ತೊಡಗಿಸಿಕೊಂಡಿದ್ದಾರೆ. ಪ್ರವಾಸೋದ್ಯಮ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರು ಸಹ ಅನಾಹುತ ಸಂಭವಿಸಿದ ಮೊದಲ ದಿನದಿಂದಲೇ ಕೊಡಗು ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿ ಜನರ ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಯಲ್ಲಿ ನಿರಂತರವಾಗಿ ಭಾಗಿಯಾಗಿ ದ್ದಾರೆ. ಇಂತಹ  ಸಂದರ್ಭದಲ್ಲಿ ರಕ್ಷಣಾ ಸಚಿವರು ಸರ್ಕಾರದ ಮನವಿಗೆ ಸ್ಪಂದಿಸಿ ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ಬೆಂಬಲ ನೀಡಿದ್ದಾರೆ. 

ಅಷ್ಟೇ ಅಲ್ಲ ಕೊಡಗಿನ ಜನರ ಸಂಕಷ್ಟ ತಿಳಿಯಲು ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದಾರೆ. ಇಂತಹ ಪರಿಸ್ಥಿತಿಯ ನಡುವೆಯೂ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತ ರಕ್ಷಣಾ ಸಚಿವರ ಆಗಮನದ  ಸಂದರ್ಭದಲ್ಲಿ ಶಿಷ್ಟಾಚಾರ ಪಾಲನೆಗೆ ಅಗತ್ಯ ಕ್ರಮ ಕೈಗೊಂಡಿದ್ದರೂ ಕೆಲವು ಅನನುಕೂಲ ಆಗಿರುವುದು ದುರದೃಷ್ಟಕರವಾಗಿದ್ದು, ಇದಕ್ಕಾಗಿ ವಿಷಾದಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಆಗಿರುವ ಅನನುಕೂಲದ ಬಗ್ಗೆ ದೂರವಾಣಿ ಮೂಲಕ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆ ತಾವು ಮಾತನಾಡಿರುವುದಾಗಿ ಹೇಳಿರುವ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಆಗಿರುವ ಘಟನೆಗೆ ಯಾವುದೇ ಬಣ್ಣ ಬಳಿದು ನಮ್ಮ ಗುರಿಯ ಹಾದಿಯಿಂದ ವಿಚಲಿತರಾಗುವುದು ಬೇಡ. ಕೇಂದ್ರ ಸರ್ಕಾರ, ಅದರಲ್ಲೂ ರಕ್ಷಣಾ ಸಚಿವರ ಬೆಂಬಲ ಹೀಗೆಯೇ ಮುಂದುವರೆಯುವುದೆಂಬ ನಂಬಿಕೆ ತಮಗೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Latest Videos
Follow Us:
Download App:
  • android
  • ios