ಸಿದ್ದು, ಎಚ್‌ಡಿಕೆ ನಾಮಪತ್ರ ಇಂದು

First Published 20, Apr 2018, 11:46 AM IST
HD Kumaraswamy Cm Siddaramaiah File Nomination
Highlights

ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಹಲವಾರು ನಾಯಕರು ಶುಕ್ರವಾರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಸೇರಿದಂತೆ ಹಲವಾರು ನಾಯಕರು ಶುಕ್ರವಾರ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ, ಕುಮಾರಸ್ವಾಮಿ ಅವರು ರಾಮನಗರದಲ್ಲಿ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆ. ಉಳಿದಂತೆ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರಿನ ಬಿಟಿಎಂ ಲೇ ಔಟ್‌ನಿಂದ, ಅವರ ಪುತ್ರಿ ಸೌಮ್ಯಾ ರೆಡ್ಡಿ ಜಯನಗರದಿಂದ, ಸಚಿವರಾದ ವಿನಯ ಕುಲಕರ್ಣಿ- ಧಾರವಾಡ ಗ್ರಾಮೀಣ, ಆರ್‌.ವಿ. ದೇಶಪಾಂಡೆ- ಹಳಿಯಾಳ, ಪ್ರಿಯಾಂಕ್‌ ಖರ್ಗೆ- ಚಿತ್ತಾಪುರ, ಶರಣ ಪ್ರಕಾಶ್‌ ಪಾಟೀಲ್‌- ಸೇಡಂ, ಈಶ್ವರ ಖಂಡ್ರೆ- ಭಾಲ್ಕಿ, ಎಂ.ಬಿ. ಪಾಟೀಲ್‌- ಬಬಲೇಶ್ವರದಿಂದ ನಾಮಪತ್ರ ಸಲ್ಲಿಸಲಿದ್ದಾರೆ. ಚಿಕ್ಕಮಗಳೂರಿನಿಂದ ಬಿಜೆಪಿಯ ಸಿ.ಟಿ. ರವಿ, ವಿಜಯಪುರದಿಂದ ಬಸನಗೌಡ ಪಾಟೀಲ ಯತ್ನಾಳ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆ.

ಸಚಿವ ರಾಮಲಿಂಗಾರೆಡ್ಡಿ ಅವರು ಬೆಂಗಳೂರಿನ ಬಿಟಿಎಂ ವಾರ್ಡ್‌ನಿಂದ ನಾಮಪತ್ರ ಸಲ್ಲಿಸುತ್ತಿದ್ದು, ಅವರ ಪುತ್ರಿ ಸೌಮ್ಯರೆಡ್ಡಿ ಜಯನಗರದಿಂದ ನಾಮಪತ್ರ ಸಲ್ಲಿಸುತ್ತಿದ್ದಾರೆ. ಧಾರವಾಡ ಜಿಲ್ಲೆ ಗ್ರಾಮೀಣ ಕ್ಷೇತ್ರದಿಂದ ವಿನಯ ಕುಲಕರ್ಣಿ, ಉತ್ತರ ಕನ್ನಡ ಜಿಲ್ಲೆ ಹಳಿಯಾಳದಿಂದ ಸಚಿವ ಆರ್‌.ವಿ.ದೇಶಪಾಂಡೆ, ಕಲಬುರಗಿ ಜಿಲ್ಲೆಯ ಚಿತ್ತಾಪುರದಿಂದ ಸಚಿವ ಪ್ರಿಯಾಂಕ್‌ ಖರ್ಗೆ, ಸೇಡಂನಿಂದ ಡಾ. ಶರಣಪ್ರಕಾಶ್‌ ಪಾಟೀಲ್‌, ಬೀದರ್‌ ಜಿಲ್ಲೆ ಭಾಲ್ಕಿಯಿಂದ ಈಶ್ವರ್‌ ಖಂಡ್ರೆ ಹಾಗೂ ವಿಜಯಪುರ ಜಿಲ್ಲೆ ಬಬಲೇಶ್ವರದಿಂದ ಸಚಿವ ಎಂ.ಬಿ.ಪಾಟೀಲ್‌ ನಾಮಪತ್ರ ಸಲ್ಲಿಸಲಿದ್ದಾರೆ.

ಬೆಂಗಳೂರು ಯಶವಂತಪುರ ಕ್ಷೇತ್ರದಿಂದ ಶಾಸಕ ಎಸ್‌.ಟಿ.ಸೋಮಶೇಖರ್‌, ರಾಜರಾಜೇಶ್ವರಿ ನಗರದಿಂದ ಮುನಿರತ್ನ, ಗಾಂಧಿನಗರದಿಂದ ದಿನೇಶ್‌ ಗುಂಡೂರಾವ್‌, ಕಲಬರಗಿ ಜಿಲ್ಲೆ ಅಫಜಲ್ಪುರದಿಂದ ಮಾಲೀಕಯ್ಯ ಗುತ್ತೇದಾರ್‌, ಹುಬ್ಬಳ್ಳಿ-ಧಾರವಾಡ ಪಶ್ಚಿಮದಿಂದ ಶಾಸಕ ಅರವಿಂದ ಬೆಲ್ಲದ, ನವಲಗುಂದ ಕ್ಷೇತ್ರದಿಂದ ಶಾಸಕ ಎನ್‌.ಎಚ್‌. ಕೋನರಡ್ಡಿ(ಜೆಡಿಎಸ್‌) ಕುಂದಗೋಳ ಕ್ಷೇತ್ರದಿಂದ ಸಿ.ಎಸ್‌. ಶಿವಳ್ಳಿ, ಕೊಪ್ಪಳ ಜಿಲ್ಲೆ ಕನಕಗಿರಿಯಿಂದ ಶಿವರಾಜ ತಂಗಡಗಿ, ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದಿಂದ ಎಸ್‌ ಅಂಗಾರ, ಬೆಳ್ತಂಗಡಿ ಕೆ.ವಸಂತ ಬಂಗೇರ, ಹರೀಶ್‌ ಪೂಂಜ, ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಲಕ್ಷ್ಮೇಹೆಬ್ಬಾಳ್ಕರ್‌, ವಿಜಯಪುರ ನಗರದಿಂದ ಬಸವನಗೌಡ ಪಾಟೀಲ್‌ ಯತ್ನಾಳ್‌, ಚಿಕ್ಕಮಗಳೂರಿನಿಂದ ಶಾಸಕ ಸಿ.ಟಿ.ರವಿ ನಾಮಪತ್ರ ಸಲ್ಲಿಸಲಿದ್ದಾರೆ.

loader