2 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಚ್’ಡಿ ಕುಮಾರಸ್ವಾಮಿ

HD Kumaraswamy likely to contest from two Assembly  Constituency
Highlights

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಸೇರಿದಂತೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ.

ಮೈಸೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಸೇರಿದಂತೆ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದ್ದಾರೆ. ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ನನ್ನ ಕರ್ಮ

ಭೂಮಿಯಾಗಿದ್ದು ಕಾರ್ಯಕರ್ತರ ಒತ್ತಡ, ಬಯಕೆಯಂತೆ ಮತ್ತೊಂದು ಕಡೆ ಕಣಕ್ಕಿಳಿಯುತ್ತೇನೆ ಎಂದು ತಿಳಿಸಿದರು. ನಮಗೆ ಪ್ರತಿಯೊಂದು ಕ್ಷೇತ್ರವೂ ಸೂಕ್ಷ್ಮವಾಗಿದೆ. ಪ್ರತಿಯೊಂದು ಕ್ಷೇತ್ರವನ್ನು ಗೆಲ್ಲಬೇಕು. ಉತ್ತರ ಕರ್ನಾಟಕದ ಬದಲು ಇದೇ ಭಾಗದಲ್ಲಿ ಸ್ಪರ್ಧಿಸುತ್ತೇನೆ ಎಂದರು. ಏಪ್ರಿಲ್ ಮೊದಲ ವಾರದಲ್ಲಿ 2ನೇ ಪಟ್ಟಿ ಬಿಡುಗಡೆಗೊಳಿಸುವುದಾಗಿ ಅವರು ಹೇಳಿದರು.

loader