ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಯಶಸ್ಸಿನ ಉತ್ತುಂಗಕ್ಕೆ ಏರಿಕೆ. ಇದೇ ವೇಳೆ ರಾಜ್ಯ ರಾಜಕೀಯದಲ್ಲಿ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ. ರಾಜೀನಾಂಎ ವಿಚಾರ ಸಾಕಷ್ಟು ಚರ್ಚೆಗೆ ಒಳಪಟ್ಟಿದೆ. 

ಚಿಕ್ಕಮಗಳೂರು: ರಾಜ್ಯದ ಜನರು ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯನ್ನು ತಿರಸ್ಕರಿಸಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್‌ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಯನ್ನು ಆ ಪಕ್ಷಗಳ ಕಾರ್ಯಕರ್ತರು ಒಪ್ಪಿಕೊಂಡಿಲ್ಲ ಎಂಬುದು ಇದೀಗ ಸಾಬೀತಾಗಿದೆ. 

ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಜಯಗಳಿಸಿದ್ದಾರೆ. ನಿಖಿಲ್‌ ಕುಮಾರಸ್ವಾಮಿ ಅವರಿಗೆ ಸೋಲಾಗಿದೆ. ಇದರ ನೈತಿಕ ಹೊಣೆಯನ್ನು ಎಚ್‌.ಡಿ. ಕುಮಾರಸ್ವಾಮಿ ಹೊರಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ಮೈತ್ರಿಪಕ್ಷಗಳ ಮುಖಂಡರು ಹಲವು ಬಾರಿ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದಾರೆ. ಮುಂದಿನ ದಿನಗಳಲ್ಲಿ ಒಳಬಂಡಾಯದಿಂದ ಈ ಸರ್ಕಾರ ಉರುಳಬಹುದು ಎಂದು ಹೇಳಿದರು.