Asianet Suvarna News Asianet Suvarna News

ಬಿಜೆಪಿಗರು ಟೀಕೆಯಲ್ಲೇ ಕಾಲ ಕಳೆಯಬಾರದು: ಎಚ್‌ಡಿಕೆ

ಬೆಂಗಳೂರು :  ಬಿಜೆಪಿ ನಾಯಕರು ನಮ್ಮನ್ನು ಟೀಕಿಸುವುದರಲ್ಲೇ ಕಾಲಹರಣ ಮಾಡುತ್ತಿದ್ದು, ಅದರಲ್ಲಿಯೇ ಕಾಲ ಕಳೆಯಬಾರದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟಿದ್ದಾರೆ. ಗುರುವಾರ ನಗರದಲ್ಲಿ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಸರ್ಕಾರ ರಚನೆ ಮಾಡಿದ ಬಳಿಕ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿರುವ ಬಿಜೆಪಿ ಹತಾಶೆಯ ಸ್ಥಿತಿಗೆ ತಲುಪಿದೆ. ಹೀಗಾಗಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯನ್ನು ಬಿಜೆಪಿ ಟೀಕೆ ಮಾಡುವುದರಲ್ಲಿಯೇ ಕಾಲಹರಣ ಕಾಡುತ್ತಿದೆ. ಸುಮ್ಮನೆ ಟೀಕೆ ಮಾಡುತ್ತಾ ಅದರಲ್ಲಿಯೇ ಕಾಲ ಕಳೆಯಬಾರದು ಎಂದು ಕಿಡಿಕಾರಿದರು.

ರೈತರ ಸಾಲ ಮನ್ನಾ ಮಾಡುವ ವಿಚಾರವೇ ಮೊದಲ ಆದ್ಯತೆ. ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರೊಂದಿಗೆ ಚರ್ಚಿಸಿ ಅದಷ್ಟುಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುತ್ತೇನೆ. ರೈತರ ಸಾಲ ಮನ್ನಾ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಎಂದು ಪುನರುಚ್ಚರಿಸಿದರು. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡೆದುಕೊಂಡು ಬಂದ ಘಟನೆ ಹಿನ್ನೆಲೆಯಲ್ಲಿ ಭದ್ರತಾ ಲೋಪದ ಕುರಿತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದರು.

ಎಚ್‌ಡಿಕೆಗೆ ತೊಂದರೆ ಕೊಡಬೇಡಿ- ಸ್ವಾಮೀಜಿ:  ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಅಧಿಕಾರದ ಆಸೆಯಿಂದ ಮುಖ್ಯಮಂತ್ರಿ ಆಗಿಲ್ಲ. ಬದಲಿಗೆ ರಾಜ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಯಾಗಿದ್ದಾರೆ. ಕುಮಾರಸ್ವಾಮಿ ಅವರು ವ್ಯಕ್ತಿಯಲ್ಲ, ಅವರು ಒಂದು ಶಕ್ತಿ ಎಂದು ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಬಣ್ಣಿಸಿದರು.

ಎಲ್ಲ ವರ್ಗದ ಜನರು ಕುಮಾರಸ್ವಾಮಿ ಅವರ ಜತೆಗಿದ್ದಾರೆ. ಅವರಿಗೆ ತೊಂದರೆ ಕೊಡುವುದು ಬೇಡ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸಹ ತೊಂದರೆ ಕೊಡುವುದು ಬೇಡ ಎಂದು ಹೇಳಿದರು.

ಆರು ತಿಂಗಳು ಕಾಲ ಕುಮಾರಸ್ವಾಮಿ ಏನು ಮಾಡಲಿದ್ದಾರೆ ಎಂಬುದನ್ನು ಕಾದು ನೋಡಿ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಾರ್ಗದಲ್ಲಿ ಕುಮಾರಸ್ವಾಮಿ ನಡೆಯುತ್ತಾರೆ. ದೇವೇಗೌಡರಂತೆ ಕೆಲಸ ಮಾಡಲು ಸಲಹೆ ನೀಡಲಾಗಿದೆ. ನೀರಾವರಿಗೆ, ರೈತರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವುದು, ದುಡಿಯುವ ಕೈಗಳಿಗೆ ಕೆಲಸ ಕೊಡುವುದು ಸೇರಿದಂತೆ ಇತರೆ ಸಲಹೆಗಳನ್ನು ನೀಡಲಾಗಿದೆ. ಕುಮಾರಸ್ವಾಮಿ ಅವರು ಅಂದುಕೊಂಡಂತೆ ಮಾಡಲಿದ್ದಾರೆ. ಹೀಗಾಗಿ ನಾಡಿನ ಜತೆಗೆ ಕಾದು ನೋಡಬೇಕು ಎಂದರು.

ಒಂದೇ ದಿನ ಮೂರು ಸ್ವಾಮೀಜಿಗಳ ಭೇಟಿ :  ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಮರುದಿನವಾದ ಗುರುವಾರ ಎಚ್‌.ಡಿ.ಕುಮಾರಸ್ವಾಮಿ ಅವರು ಒಂದೇ ದಿನದಲ್ಲಿ ಮೂವರು ಪ್ರಮುಖ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಚನ ಪಡೆದರು.

ಬೆಳಗ್ಗೆ ಬೆಂಗಳೂರಿನಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಹಾಗೂ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು. ನಂತರ ಮಧ್ಯಾಹ್ನ ತುಮಕೂರಿಗೆ ತೆರಳಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಎಚ್‌ಡಿಡಿ-ಎಚ್‌ಡಿಕೆ ಭೇಟಿ :  ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಭೇಟಿ ಮಾಡಿ ಆಡಳಿತ ವೈಖರಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದರು. ರಾಜಕೀಯ ವಿದ್ಯಮಾನಗಳ ಬಗ್ಗೆ ಸಲಹೆ ನೀಡಿದ ದೇವೇಗೌಡ ಅವರು, ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದು, ಜನರ ಹಿತಾಸಕ್ತಿ ಕಾಪಾಡುವುದು ಮತ್ತು ಸುಭದ್ರ ಸರ್ಕಾರವನ್ನು ಕಾಪಾಡಿಕೊಂಡು ಹೋಗುವುದರ ಕುರಿತು ಸಲಹೆ-ಸೂಚನೆಗಳನ್ನು ನೀಡಿದರು ಎನ್ನಲಾಗಿದೆ.

HD Kumaraswamy Slams BJP Leaders

ಬೆಂಗಳೂರು :  ಬಿಜೆಪಿ ನಾಯಕರು ನಮ್ಮನ್ನು ಟೀಕಿಸುವುದರಲ್ಲೇ ಕಾಲಹರಣ ಮಾಡುತ್ತಿದ್ದು, ಅದರಲ್ಲಿಯೇ ಕಾಲ ಕಳೆಯಬಾರದು ಎಂದು ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಬಿಜೆಪಿ ನಾಯಕರಿಗೆ ಟಾಂಗ್‌ ಕೊಟ್ಟಿದ್ದಾರೆ. ಗುರುವಾರ ನಗರದಲ್ಲಿ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿಯ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿಯನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದರು.

ಸರ್ಕಾರ ರಚನೆ ಮಾಡಿದ ಬಳಿಕ ಬಹುಮತ ಸಾಬೀತುಪಡಿಸುವಲ್ಲಿ ವಿಫಲವಾಗಿರುವ ಬಿಜೆಪಿ ಹತಾಶೆಯ ಸ್ಥಿತಿಗೆ ತಲುಪಿದೆ. ಹೀಗಾಗಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಯನ್ನು ಬಿಜೆಪಿ ಟೀಕೆ ಮಾಡುವುದರಲ್ಲಿಯೇ ಕಾಲಹರಣ ಕಾಡುತ್ತಿದೆ. ಸುಮ್ಮನೆ ಟೀಕೆ ಮಾಡುತ್ತಾ ಅದರಲ್ಲಿಯೇ ಕಾಲ ಕಳೆಯಬಾರದು ಎಂದು ಕಿಡಿಕಾರಿದರು.

ರೈತರ ಸಾಲ ಮನ್ನಾ ಮಾಡುವ ವಿಚಾರವೇ ಮೊದಲ ಆದ್ಯತೆ. ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರೊಂದಿಗೆ ಚರ್ಚಿಸಿ ಅದಷ್ಟುಶೀಘ್ರದಲ್ಲಿಯೇ ನಿರ್ಧಾರ ಕೈಗೊಳ್ಳುತ್ತೇನೆ. ರೈತರ ಸಾಲ ಮನ್ನಾ ವಿಚಾರದಲ್ಲಿ ಯಾವುದೇ ಅನುಮಾನ ಬೇಡ ಎಂದು ಪುನರುಚ್ಚರಿಸಿದರು.

ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಸಂದರ್ಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಡೆದುಕೊಂಡು ಬಂದ ಘಟನೆ ಹಿನ್ನೆಲೆಯಲ್ಲಿ ಭದ್ರತಾ ಲೋಪದ ಕುರಿತು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದರು.

ಎಚ್‌ಡಿಕೆಗೆ ತೊಂದರೆ ಕೊಡಬೇಡಿ- ಸ್ವಾಮೀಜಿ:  ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಅಧಿಕಾರದ ಆಸೆಯಿಂದ ಮುಖ್ಯಮಂತ್ರಿ ಆಗಿಲ್ಲ. ಬದಲಿಗೆ ರಾಜ್ಯದ ಅಭಿವೃದ್ಧಿಗಾಗಿ ಮುಖ್ಯಮಂತ್ರಿಯಾಗಿದ್ದಾರೆ. ಕುಮಾರಸ್ವಾಮಿ ಅವರು ವ್ಯಕ್ತಿಯಲ್ಲ, ಅವರು ಒಂದು ಶಕ್ತಿ ಎಂದು ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ಥಾನ ಮಠದ ನಂಜಾವಧೂತ ಸ್ವಾಮೀಜಿ ಬಣ್ಣಿಸಿದರು.

ಎಲ್ಲ ವರ್ಗದ ಜನರು ಕುಮಾರಸ್ವಾಮಿ ಅವರ ಜತೆಗಿದ್ದಾರೆ. ಅವರಿಗೆ ತೊಂದರೆ ಕೊಡುವುದು ಬೇಡ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಸಹ ತೊಂದರೆ ಕೊಡುವುದು ಬೇಡ ಎಂದು ಹೇಳಿದರು.

ಆರು ತಿಂಗಳು ಕಾಲ ಕುಮಾರಸ್ವಾಮಿ ಏನು ಮಾಡಲಿದ್ದಾರೆ ಎಂಬುದನ್ನು ಕಾದು ನೋಡಿ. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಾರ್ಗದಲ್ಲಿ ಕುಮಾರಸ್ವಾಮಿ ನಡೆಯುತ್ತಾರೆ. ದೇವೇಗೌಡರಂತೆ ಕೆಲಸ ಮಾಡಲು ಸಲಹೆ ನೀಡಲಾಗಿದೆ. ನೀರಾವರಿಗೆ, ರೈತರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವುದು, ದುಡಿಯುವ ಕೈಗಳಿಗೆ ಕೆಲಸ ಕೊಡುವುದು ಸೇರಿದಂತೆ ಇತರೆ ಸಲಹೆಗಳನ್ನು ನೀಡಲಾಗಿದೆ. ಕುಮಾರಸ್ವಾಮಿ ಅವರು ಅಂದುಕೊಂಡಂತೆ ಮಾಡಲಿದ್ದಾರೆ. ಹೀಗಾಗಿ ನಾಡಿನ ಜತೆಗೆ ಕಾದು ನೋಡಬೇಕು ಎಂದರು.

ಒಂದೇ ದಿನ ಮೂರು ಸ್ವಾಮೀಜಿಗಳ ಭೇಟಿ :  ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಮರುದಿನವಾದ ಗುರುವಾರ ಎಚ್‌.ಡಿ.ಕುಮಾರಸ್ವಾಮಿ ಅವರು ಒಂದೇ ದಿನದಲ್ಲಿ ಮೂವರು ಪ್ರಮುಖ ಸ್ವಾಮೀಜಿಗಳನ್ನು ಭೇಟಿ ಮಾಡಿ ಆಶೀರ್ವಚನ ಪಡೆದರು. ಬೆಳಗ್ಗೆ ಬೆಂಗಳೂರಿನಲ್ಲಿ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಹಾಗೂ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ ಅವರನ್ನು ಭೇಟಿ ಮಾಡಿದರು. ನಂತರ ಮಧ್ಯಾಹ್ನ ತುಮಕೂರಿಗೆ ತೆರಳಿ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಎಚ್‌ಡಿಡಿ-ಎಚ್‌ಡಿಕೆ ಭೇಟಿ :  ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅವರನ್ನು ಪದ್ಮನಾಭನಗರದ ನಿವಾಸದಲ್ಲಿ ಭೇಟಿ ಮಾಡಿ ಆಡಳಿತ ವೈಖರಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚಿಸಿದರು. ರಾಜಕೀಯ ವಿದ್ಯಮಾನಗಳ ಬಗ್ಗೆ ಸಲಹೆ ನೀಡಿದ ದೇವೇಗೌಡ ಅವರು, ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದು, ಜನರ ಹಿತಾಸಕ್ತಿ ಕಾಪಾಡುವುದು ಮತ್ತು ಸುಭದ್ರ ಸರ್ಕಾರವನ್ನು ಕಾಪಾಡಿಕೊಂಡು ಹೋಗುವುದರ ಕುರಿತು ಸಲಹೆ-ಸೂಚನೆಗಳನ್ನು ನೀಡಿದರು ಎನ್ನಲಾಗಿದೆ.

Follow Us:
Download App:
  • android
  • ios