ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆಂದು ಹೇಳುತ್ತಿದ್ದ ಬಿಜೆಪಿ ಇದೀಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಶಾಸಕರ ಕೈ-ಕಾಲು ಹಿಡಿಯುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.  

ಬೆಂಗಳೂರು :  ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುತ್ತೇವೆಂದು ಹೇಳುತ್ತಿದ್ದ ಬಿಜೆಪಿ ಇದೀಗ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಕಾಂಗ್ರೆಸ್ ಶಾಸಕರ ಕೈ-ಕಾಲು ಹಿಡಿಯುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. 

ಕಳೆದ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವುದೇ ತಮ್ಮ ಗುರಿ ಎಂದು ಯಡಿಯೂರಪ್ಪ ಸೇರಿದಂತೆ ಬಿಜೆಪಿಯ ಹಲವು ನಾಯಕರು ಹೇಳಿದ್ದರು. 

ಆದರೆ ಈಗ ಅದೇ ಕಾಂಗ್ರೆಸ್ ಶಾಸಕರ ಕೈ ಕಾಲು ಹಿಡಿಯುತ್ತಿದ್ದಾರೆ. ಅಧಿಕಾರದ ಆಸೆಗಾಗಿ ಆಡಳಿತ ಪಕ್ಷದ ಶಾಸಕರಿಗೆ ಆಮಿಷವೊಡ್ಡುತ್ತಿದ್ದಾರೆ ಎಂದು ಟೀಕಿಸಿದರು.