ಉಡುಪಿಯಲ್ಲಿ ನಡೆದ ಧರ್ಮ ಸಂಸದ್ ಮತ್ತು ಮೈಸೂರಿನ ಸಾಹಿತ್ಯ ಸಮ್ಮೇಳನ ರಾಜಕೀಯ ಕೃಪಾಪೋಷಿತ ಕಾರ್ಯಕ್ರಮಗಳು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಚನ್ನಪಟ್ಟಣ: ಉಡುಪಿಯಲ್ಲಿ ನಡೆದ ಧರ್ಮ ಸಂಸದ್ ಮತ್ತು ಮೈಸೂರಿನ ಸಾಹಿತ್ಯ ಸಮ್ಮೇಳನ ರಾಜಕೀಯ ಕೃಪಾಪೋಷಿತ ಕಾರ್ಯಕ್ರಮಗಳು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹುಲುವಾಡಿ ಗ್ರಾಮದಲ್ಲಿ ಮಾತನಾಡಿ, ಧರ್ಮ ಸಂಸತ್ ಬಿಜೆಪಿ ಪ್ರೇರಿತ ಕಾರ್ಯಕ್ರಮವಾದರೆ, ಸಾಹಿತ್ಯ ಸಮ್ಮೇಳನ ಕಾಂಗ್ರೆಸ್ ಪ್ರೇರಿತ ಕಾರ್ಯಕ್ರಮವಾಗಿದ್ದು ಎರಡೂ ಚುನಾವಣಾ ಗಿಮಿಕ್‌ಗಳು ಎಂದರು.

ರಾಜ್ಯದಲ್ಲಿ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಮನ ಜಪ ಆರಂಭಿಸಿದೆ. ಉತ್ತರ ಪ್ರದೇಶದಲ್ಲಿ ಕಟ್ಟ ಬೇಕಾದ ರಾಮಮಂದಿರಕ್ಕೆ ಉಡುಪಿಯಲ್ಲಿ ಧರ್ಮ ಸಂಸತ್ ನಡೆಸುವ ಉದ್ದೇಶವಾದರೂ ಏನಿತ್ತು ಎಂದು ಪ್ರಶ್ನಿಸಿದರು.