ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಅವರೇ 5 ವರ್ಷಗಳ ಕಾಲ  ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಕಾಂಗ್ರೆಸ್ ವರಿಷ್ಠರು ಲಿಖಿತವಾಗಿ ಮಾತು ಕೊಟ್ಟಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ. 

ಸಮ್ಮಿಶ್ರ ಸರ್ಕಾರ ರಚನೆ ಮಾಡುವ ವೇಳೆಯಲ್ಲಿಯೇ ಈ ಬಗ್ಗೆ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪತ್ರ ಬರೆದು ಕೊಟ್ಟಿದ್ದಾರೆ. 

ಕಾಂಗ್ರೆಸ್ ವರಿಷ್ಠರೇ ಲಿಖಿತವಾಗಿ ವಚನ ನೀಡಿರುವ ಹಿನ್ನೆಲೆಯಲ್ಲಿ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ದೇವೇಗೌಡರು ಖಚಿತ ಮಾತುಗಳನ್ನಾಡಿದ್ದಾರೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.