ಬೆಂಗಳೂರು, [ಜೂನ್.13]: ನಡೆದಾಡುವ ದೇವರು ಎಂದೇ ಪ್ರಸಿದ್ಧಿಯಾಗಿರುವ ಡಾ ಶಿವಕುಮಾರ್ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಧಾನ ಮಂತ್ರಿ ಮೋದಿಗೆ ಮತ್ತೆ ಪತ್ರ ಬರೆದಿದ್ದಾರೆ.

ಸಾವಿರಾರು ಮಕ್ಕಳಿಗೆ ಉಚಿತ ಶಿಕ್ಷಣ ನೀಡಿದ ಕೀರ್ತಿಯಿದೆ.  ಶಿಕ್ಷಣ , ದಾಸೋಹ ಕ್ಷೇತ್ರದಲ್ಲಿ ಮಾಡಿದ ಸಾಧನೆ ಪರಿಗಣಿಸಿ ಅವರಿಗೆ ಭಾರತ ರತ್ನ ಪುರಸ್ಕಾರ ನೀಡಲು ಪತ್ರದ ಮೂಲಕ ಒತ್ತಾಯಿಸಿದ್ದಾರೆ. 

ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ್ ಸ್ವಾಮೀಜಿಗೆ ಭಾರತ ರತ್ನ ನೀಡುವಂತೆ ಈ ಹಿಂದೆಯೂ ಸಹ ಕುಮಾರಸ್ವಾಮಿ ಅವರು ಮೋದಿಗೆ ಪತ್ರ ಬರೆದಿದ್ದರು. ಅಷ್ಟೇ ಅಲ್ಲದೇ  ತ್ರಿವಿಧ ದಾಸೋಹಿಗೆ ಭಾರತ ರತ್ನ ನೀಡಲೇಬೇಕೆಂದು ಇಡೀ ರಾಜ್ಯದ ಕೂಗಾಗಿತ್ತು. 

ಇದೀಗ ಮತ್ತೆ ಕುಮಾರಸ್ವಾಮಿ ಅವರು ಮೋದಿಗೆ ಪತ್ರ ಬರೆದಿದ್ದು, ಇದಕ್ಕೆ ಮೊದಿ ಅವರು ಯಾವ ರೀತಿಯಾಗಿ ಸ್ಪಂದಿಸುತ್ತಾರೆ ಎನ್ನುವುದನ್ನು ಕಾದುನೋಡಬೇಕಿದೆ.

21 ಜನವರಿ 2019ರಲ್ಲಿ ಶಿವಕುಮಾರಸ್ವಾಮಿಗಳು ಲಿಂಗೈಕ್ಯರಾಗಿದ್ದರು.