ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಸಾಮಾನ್ಯ ಜನರಂತೆ 300 ರೂಪಾಯಿ ಟಿಕೆಟ್ ಪಡೆದು ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದರು. ದೇವಾಲಯದಲ್ಲಿ 1 ಗಂಟೆಗೂ ಹೆಚ್ಚು ಕಾಲ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.
ಹಾಸನ(ಅ.21): ಹಾಸನದ ಅಧಿದೇವತೆ ಹಾಸನಾಂಬೆ ದರ್ಶನಕ್ಕೆ ಭಕ್ತಸಾಗರವೇ ಹರಿದು ಬರುತ್ತಿದೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಸಾಮಾನ್ಯ ಜನರಂತೆ 300 ರೂಪಾಯಿ ಟಿಕೆಟ್ ಪಡೆದು ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆದರು. ದೇವಾಲಯದಲ್ಲಿ 1 ಗಂಟೆಗೂ ಹೆಚ್ಚು ಕಾಲ ಸರತಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.
ದರ್ಶನದ ನಂತರ ಮಾತಾಡಿದ ಮಾಜಿ ಸಚಿವ ಎಚ್.ಡಿ. ರೇವಣ್ಣ. ವಿಐಪಿಗಳ ಪಾಸ್'ಗಳಿಗೆ ದಿನಾಂಕ ನಿಗದಿಗೆ ರೇವಣ್ಣ ಆಕ್ಷೇಪ ವ್ಯಕ್ತಪಡಿಸಿದ್ರು. ನಿಗದಿತ ದಿನಾಂಕದಂದೇ ದರ್ಶನಕ್ಕೆ ಬರಬೇಕೆಂಬ ನಿಯಮ, ಜನಪ್ರತಿನಿಧಿಗಳಿಗೆ ರೂಪಿಸಿರುವ ಜಿಲ್ಲಾಡಳಿತ ನಿಯಮದ ವಿರುದ್ಧ ಎಚ್.ಡಿ. ರೇವಣ್ಣ ಅಸಮಾಧಾನ ವ್ಯಕ್ತಪಡಿಸಿದರು.
