ಕಳೆದ ತಿಂಗಳು ಹಾಸನಾಂಭ ದೇವಿಯ ಪೂಜೆಯ ದಿನದಂದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವ'ಲ್'ಗೆ ಟಿಕೆಟ್ ನೀಡುವುದಾಗಿ ಹೇಳಿದ್ದರು. ಅವರ ಭರವಸೆ ಮೇಲೆಯೇ ಈ ಹೇಳಿಕೆ ನೀಡುತ್ತಿದ್ದೇನೆ.
ಹಾಸನ(ನ.06): ಪ್ರಜ್ವಲ್ ರೇವಣ್ಣ 2018ರ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ.ಈ ಬಗ್ಗೆ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಗ್ರೀನ್ ಸಿಗ್ನಲ್ ನೀಡಿದ್ದಾರೆ' ಎಂದು ಪ್ರಜ್ವಲ್ ಅವರ ತಾಯಿ ಭವಾನಿ ರೇವಣ್ಣ ಸುವರ್ಣ ನ್ಯೂಸ್'ಗೆ ತಿಳಿಸಿದ್ದಾರೆ.
ಕಳೆದ ತಿಂಗಳು ಹಾಸನಾಂಭ ದೇವಿಯ ಪೂಜೆಯ ದಿನದಂದು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವ'ಲ್'ಗೆ ಟಿಕೆಟ್ ನೀಡುವುದಾಗಿ ಹೇಳಿದ್ದರು. ಅವರ ಭರವಸೆ ಮೇಲೆಯೇ ಈ ಹೇಳಿಕೆ ನೀಡುತ್ತಿದ್ದೇನೆ. ಕ್ಷೇತ್ರದ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ. ಬೇಲೂರು ಹಾಗೂ ರಾಜರಾಜೇಶ್ವರಿ ಎರಡೂ ಕ್ಷೇತ್ರಗಳ ಕಾರ್ಯಕರ್ತರಲ್ಲಿ ಪ್ರಜ್ವಲ್ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಅಂತಿಮ ನಿರ್ಧಾರ ದೇವೇಗೌಡರಿಗೆ ಬಿಟ್ಟಿದ್ದು' ಎಂದು ಭಾವನಿ ತಿಳಿಸಿದರು.
ನನ್ನ ಸ್ಪರ್ಧೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ
ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಆದ್ದರಿಂದ ಈ ಬಗ್ಗೆ ಯಾವುದೇ ಹೇಳಿಕೆ ನೀಡುವುದಿಲ್ಲ. ಮುಂದಿನ ಬಾರಿಯ ಚುನಾವಣೆಯ ಪ್ರಚಾರಕ್ಕೆ ನಾನು ಕೂಡ ಹೆಚ್ಚು ಸಕ್ರಿಯನಾಗುತ್ತೇನೆ. ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ನಮ್ಮ ಬಹುಮುಖ್ಯ ಉದ್ದೇಶವಾಗಿದೆ. ಖಂಡಿತಾ ಅಧಿಕಾರಕ್ಕೆ ಬಂದೇ ಬರುತ್ತೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

