ಹೇಮಾವತಿ ಬಲ ಮೇಲ್ದಂಡೆ ನಾಲೆಗೆ ನೀರು ಬಿಡುವ ಮೂಲಕ ಅರಕಲಗೂಡು, ಕೆ.ಆರ್.ನಗರ ಮತ್ತು ಕೆ.ಆರ್.ಪೇಟೆ ತಾಲೂಕಿನ ಕೆಲವು ಭಾಗಗಳ ಕೆರೆಕಟ್ಟೆಗಳನ್ನು ತುಂಬಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.
ಬೆಂಗಳೂರು(ಆ.01): ಹೇಮಾವತಿ ಬಲ ಮೇಲ್ದಂಡೆ ನಾಲೆಗೆ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದಾರೆ.
ಇಂದು ಮಧ್ಯಾಹ್ನ ಸಿಎಂ ಸಿದ್ದರಾಮಯ್ಯ ಜೊತೆ ದೂರವಾಣಿ ಮೂಲಕ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಮಾತುಕತೆ ನಡೆಸಿದರು. ದೇವೇಗೌಡರ ಮನವಿಗೆ ಸ್ಪಂದಿಸಿರುವ ಸಿಎಂ ನಾಳೆ ಅಥವಾ ನಾಡಿದ್ದು ನೀರಾವರಿ ಇಲಾಖೆ ಅಧಿಕಾರಿಗಳ ಸಭೆ ಕರೆಯಲಿದ್ದಾರೆ.
ಹೇಮಾವತಿ ಬಲ ಮೇಲ್ದಂಡೆ ನಾಲೆಗೆ ನೀರು ಬಿಡುವ ಮೂಲಕ ಅರಕಲಗೂಡು, ಕೆ.ಆರ್.ನಗರ ಮತ್ತು ಕೆ.ಆರ್.ಪೇಟೆ ತಾಲೂಕಿನ ಕೆಲವು ಭಾಗಗಳ ಕೆರೆಕಟ್ಟೆಗಳನ್ನು ತುಂಬಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು.
ಕಳೆದ ಮೂರು ವರ್ಷಗಳಿಂದ ಅತ್ಯಂತ ಕಡಿಮೆ ಮಳೆಯಾಗುತ್ತಿರುವುದರಿಂದ ನೀರಿನ ಸಮಸ್ಯೆ ತೀವ್ರಗೊಂಡಿದೆ. ಹೇಮಾವತಿ ಬಲ ಮೇಲ್ದಂಡೆ ನಾಲೆಗೆ ನೀರು ಹರಿಸದ ಕಾರಣ ಅರಕಲಗೂಡು, ಕೆ.ಆರ್.ನಗರ ಮತ್ತು ಕೆ.ಆರ್.ಪೇಟೆ ತಾಲೂಕಿನ ಕೆಲವು ಕೆರೆ-ಕಟ್ಟೆಗಳಲ್ಲಿ ನೀರಿಲ್ಲದಂತಾಗಿದೆ. ಕೊಳವೆ ಭಾವಿಗಳ ಅಂತರ್ಜಲ ಕೊರತೆಯಿಂದ ಸಂಪೂರ್ಣ ಬತ್ತಿ ಹೋಗಿವೆ. ತೀವ್ರ ಬರಗಾಲಕ್ಕೊಳಗಾಗಿರುವ ಪ್ರದೇಶವು ಹೇಮಾವತಿ ಬಲ ಮೇಲ್ದಂಡೆ ನಾಲಾ ವ್ಯಾಪ್ತಿಗೆ ಬರುತ್ತದೆ. ಆ ಭಾಗದ ಜನರ ಅನುಕೂಲಕ್ಕಾಗಿ ನಾಲೆಗೆ ನೀರು ಬಿಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದರು.
(ಸಾಂಧರ್ಬಿಕ ಚಿತ್ರ)