ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗುತ್ತಿರುವ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿಬಿಎಂಪಿ ಮಾಜಿ ಸದಸ್ಯ ಕೆ.ಸಿ.ವೆಂಕಟೇಶ್ ಅವರ ನಿವಾಸಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಭೇಟಿ ನೀಡಲಿದ್ದಾರೆ.

ಬೆಂಗಳೂರು: ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಯಾಗುತ್ತಿರುವ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿಬಿಎಂಪಿ ಮಾಜಿ ಸದಸ್ಯ ಕೆ.ಸಿ.ವೆಂಕಟೇಶ್ ಅವರ ನಿವಾಸಕ್ಕೆ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಭೇಟಿ ನೀಡಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜಾಲಹಳ್ಳಿ ಬಳಿಯ ಅಬ್ಬಿಗೆರೆ ಮುಖ್ಯರಸ್ತೆ, ಕಮ್ಮಗೊಂಡನಹಳ್ಳಿಯಲ್ಲಿನ ವೆಂಕಟೇಶ್ ನಿವಾಸಕ್ಕೆ ಶನಿವಾರ ಬೆಳಗ್ಗೆ 8.30ರ ಸುಮಾರಿಗೆ ತೆರಳಿ ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಜೆಡಿಎಸ್‌ನ ಸ್ಥಳೀಯ ನಾಯಕರು ಉಪಸ್ಥಿತರಿರುವರು.

ವೆಂಕಟೇಶ್ ಅವರು ಈ ಮೊದಲು ಬಿಬಿಎಂಪಿಯ ಸದಸ್ಯರಾಗಿದ್ದು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆಲುವಿಗೆ ಶ್ರಮಿಸಲಿದ್ದಾರೆ ಎನ್ನಲಾಗಿದೆ.