ಬಂಡವಾಳ ಆಕರ್ಷಿಸುವ ನಿಟ್ಟಿನಿಂದ ಖಾಸಗಿ ವಲಯದ ಎಚ್‌ಡಿಎಫ್‌ಸಿ ಬ್ಯಾಂಕ್‌, 1 ಕೋಟಿ ರು. ಒಳಗಿನ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ. 6.85ಕ್ಕೆ ಏರಿಕೆ ಮಾಡಿದೆ. 

ನವದೆಹಲಿ: ಬಂಡವಾಳ ಆಕರ್ಷಿಸುವ ನಿಟ್ಟಿನಿಂದ ಖಾಸಗಿ ವಲಯದ ಎಚ್‌ಡಿಎಫ್‌ಸಿ ಬ್ಯಾಂಕ್‌, 1 ಕೋಟಿ ರು. ಒಳಗಿನ ಠೇವಣಿಗಳ ಮೇಲಿನ ಬಡ್ಡಿ ದರವನ್ನು ಶೇ. 6.85ಕ್ಕೆ ಏರಿಕೆ ಮಾಡಿದೆ. 
ಒಂದು ವರ್ಷದ ಅವಧಿಯ ಠೇವಣಿಗಳ ಮೇಲಿನ ಬಡ್ಡಿ ದರಗಳನ್ನು ಶೇ.6.75ರಿಂದ ಶೇ.6.85ಕ್ಕೆ ಏರಿಕೆ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎರಡು ವರ್ಷದಿಂದ 5 ವರ್ಷದ ಠೇವಣಿಗಳ ಮೇಲಿನ ಬಡ್ಡಿಯನ್ನು ಶೇ.6ರಿಂದ ಶೇ.7ಕ್ಕೆ ಎರಿಸಲಾಗಿದೆ. 10 ವರ್ಷಗಳ ನಿಶ್ಚಿತ ಠೇವಣಿಗಳ ಮೇಲಿನ ಬಡ್ಡಿದರವನ್ನು ಶೇ.7.73ಕ್ಕೆ ಏರಿಸಲಾಗಿದೆ. ಎಚ್‌ಡಿಎಫ್‌ಸಿ ಬ್ಯಾಂಕ್‌ ಕಳೆದ ಹಣಕಾಸು ವರ್ಷದಲ್ಲಿ 17,486 ಕೋಟಿ ರು. ನಿವ್ವಳ ಲಾಭ ಗಳಿಸಿದೆ.