ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು. ಕುಮಾರಸ್ವಾಮಿ ಅವರು ದೇವರಹಿಪ್ಪರಗಿ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಇತ್ತೀಚಿನ ದಿನಗಳಲ್ಲಿ ಗುಸುಗುಸು ಇದೆ. ಅದರ ಬೆನ್ನಲ್ಲೇ ಎಚ್‌ಡಿಕೆ ಅವರ ಈ ಹೇಳಿಕೆ ಹೊರಬಿದ್ದಿದೆ.

ಬೆಂಗಳೂರು: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಕರ್ನಾಟಕದಿಂದ ಸ್ಪರ್ಧಿಸುವ ಸುಳಿವನ್ನು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ನೀಡಿದ್ದಾರೆ. ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸುವ ಕುರಿತು ಚಿಂತನೆ ನಡೆಸುತ್ತಿದ್ದೇನೆ. ಈ ಕುರಿತು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಅವರು ಹೇಳಿದ್ದಾರೆ.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ವಿಜಯಪುರ ಜಿಲ್ಲೆಯಿಂದ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿ ಶೀಘ್ರದಲ್ಲೇ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು. ಕುಮಾರಸ್ವಾಮಿ ಅವರು ದೇವರಹಿಪ್ಪರಗಿ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ಇತ್ತೀಚಿನ ದಿನಗಳಲ್ಲಿ ಗುಸುಗುಸು ಇದೆ. ಅದರ ಬೆನ್ನಲ್ಲೇ ಎಚ್‌ಡಿಕೆ ಅವರ ಈ ಹೇಳಿಕೆ ಹೊರಬಿದ್ದಿದೆ.

ಈ ನಡುವೆ, ಪಕ್ಷದ ಹಿರಿಯ ಮುಖಂಡ ಜಿ.ಟಿ.ದೇವೇಗೌಡ ಅವರು ರಾಷ್ಟ್ರೀಯ ಅಧ್ಯಕ್ಷರಿಗೆ ದೂರು ನೀಡಲು ಮುಂದಾಗಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಮೈಸೂರು ಜಿಲ್ಲಾ ಜೆಡಿಎಸ್‌ನಲ್ಲಿ ಕೆಲವೊಂದು ಬೆಳವಣಿಗೆಗಳು ಆಗಿವೆ. ಈ ಕುರಿತು ಬೆಂಗಳೂರಿಗೆ ಹೋದ ಬಳಿಕವೇ ಪೂರ್ಣ ಮಾಹಿತಿ ಪಡೆದುಕೊಂಡು ಕ್ರಮ ಕೈಗೊಳ್ಳುತ್ತೇನೆ ಎಂದರು.