ಮೋದಿ ಅವರು 2019ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಈಗಿನಿಂದಲೇ ಪ್ರಚಾರಕ್ಕೆ ಸಿದ್ಧತೆ ನಡೆಸಿದ್ದಾರೆ. ಅಂತೆಯೇ ರಾಜ್ಯದಲ್ಲಿ 2018ಕ್ಕೆ ನಡೆಯುವ ವಿಧಾನಸಭೆ ಚುನಾವಣೆ ಗುರಿಯಾಗಿಟ್ಟುಕೊಂಡು ನಾವು ಕಾರ್ಯಕ್ರಮ ರೂಪಿಸಲು ಮುಂದಾಗಿದ್ದೇವೆ. ಮೇಕ್‌ ಇಂಡಿಯಾ ಕಲ್ಪನೆ ಮೋದಿ ಅವರದ್ದಾಗಿದ್ದರೆ, ನನ್ನದು ಕರ್ನಾಟಕವನ್ನು ವಿಶ್ವದ ಭೂಪಟದಲ್ಲಿ ನಾಯಕ ಎಂದು ಬಿಂಬಿಸುವ ಪ್ರಯತ್ನ. -ಎಚ್‌.ಡಿ.ಕುಮಾರಸ್ವಾಮಿ, ಜೆಡಿಎಸ್‌ ರಾಜ್ಯಾಧ್ಯಕ್ಷ

ಬೆಂಗಳೂರು(ಏ.13): ಸಾಮಾಜಿಕ ಜಾಲತಾಣವನ್ನು ಪರಿಣಾಮಕಾರಿ ಯಾಗಿ ಚುನಾವಣೆಯ ಅಸ್ತ್ರವನ್ನಾಗಿ ಬಳಸಿ ಕೊಂಡು ಜನರನ್ನು ಆಕರ್ಷಿಸಿ ಅಧಿಕಾರದ ಗದ್ದುಗೆ ಹಿಡಿಯುವಲ್ಲಿ ಯಶಸ್ವಿಯಾದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಯ ಹಾದಿಯಲ್ಲಿಯೇ ಇದೀಗ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಸಾಗಲು ಮುಂದಾಗಿದ್ದಾರೆ.
ನಗರದಲ್ಲಿನ ಐಟಿ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕ್ರಿಯಾಶೀಲವಾಗಿರುವ ಎಂಜಿನಿಯರ್‌ ಹಾಗೂ ಇತರೆ ವ್ಯಕ್ತಿಗಳೊಂದಿಗೆ ಸಂವಾದ ನಡೆಸಲು ಮುಂದಾಗಿರುವ ಕುಮಾರಸ್ವಾಮಿ ಅವರು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏ.15ರಂದು (ಶನಿವಾರ) ಐಟಿ ಉದ್ಯೋಗಿಗಳೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಟ್ಸ್‌ಆಪ್‌, ಫೇಸ್‌ಬುಕ್‌ ಫಾಲೋಅಪ್‌ ಮತ್ತು ಐಟಿ ಉದ್ಯೋ ಗಿಗಳ ಜತೆ ಸಂವಾದ ನಡೆಸುವ ವಿಶೇಷ ಕಾರ್ಯ ಕ್ರಮವನ್ನು 15ರಂದು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಈ ಕಾರ್ಯಕ್ರಮ ಜರುಗಲಿದೆ. ‘ಕರ್ನಾಟಕದ ಆಡಳಿತ ಕರ್ನಾಟಕದಿಂದಲೇ' ಎಂಬ ಘೋಷ ವಾಕ್ಯದೊಂದಿಗೆ ಕಾರ್ಯಕ್ರಮವನ್ನು ನಡೆಸಲಾಗುವುದು. ಕಳೆದ 5-6 ತಿಂಗಳಿನಿಂದ ಸ್ನೇಹಿತರು ಈ ಕಾರ್ಯಕ್ರಮ ನಡೆಸುವ ಸಿದ್ಧತೆಯಲ್ಲಿದ್ದು, ಹಲವು ವಾಟ್ಸ್‌ಆಪ್‌ ಗ್ರೂಪ್‌ಗಳಿಗೆ ಆಹ್ವಾನ ನೀಡಲಾಗಿದೆ ಎಂದರು.