. ಈ ಸಂದರ್ಭದಲ್ಲಿ ಮಾಜಿ ಸಚಿವ ದಿ. ಹೆಚ್.ಜಿ. ಗೋವಿಂದೇಗೌಡ ಅವರ ಪುತ್ರ ಜಿ.ಹೆಚ್.ವೆಂಕಟೇಶ್ ಗೌಡ ಅವರು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅನೇಕ ಮುಖಂಡರೊಂದಿಗೆ ಪಕ್ಷಕ್ಕೆ ಸೇರ್ಪಡೆಯಾದರು.
ಬೆಂಗಳೂರು(ಡಿ.8): ಕುಮಾರಸ್ವಾಮಿಯೇ ಜೆಡಿಎಸ್'ನ ರಾಜ್ಯಾಧ್ಯಕ್ಷರಾಗಬೇಕೆಂದು ನನ್ನ ಬಯಕೆಯಲ್ಲ ಪಕ್ಷದ ಜವಾಬ್ದಾರಿ ಹೊರಲು ಯಾರಾದರೂ ಮುಂದೆ ಬಂದರೆ ಅವಕಾಶ ನೀಡುತ್ತೇನೆ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತಿಳಿಸಿದರು.
ನಾಳೆ ನಡೆಯಲಿರುವ ಜೆಡಿಎಸ್'ನ ರಾಜ್ಯ ಅಧ್ಯಕ್ಷೀಯ ಚುನಾವಣೆಯಲ್ಲಿ ಎಲ್ಲವೂ ಗೊತ್ತಾಗಲಿದೆ. ಜೊತೆಗೆ ಪಕ್ಷದ ಮುಖಂಡರೆಲ್ಲರೂ ಸೇರಿ ಜೆಡಿಎಸ್'ನ ರಾಜಕೀಯ ಮತ್ತು ಆರ್ಥಿಕ ಸ್ಥಿತಿಯ ಬಗ್ಗೆಯೂ ನಿರ್ಣಯ ಕೈಗೊಳ್ಳುತ್ತೇವೆ. ನಾಳೆ ನಡೆಯುವ ಕಾರ್ಯಕ್ರಮದಲ್ಲಿ ಮಾಜಿ ಸಚಿವರು ಹಾಗೂ ಮಾಜಿ ಶಾಸಕರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದರು. ಈ ಸಂದರ್ಭದಲ್ಲಿ ಮಾಜಿ ಸಚಿವ ದಿ. ಹೆಚ್.ಜಿ. ಗೋವಿಂದೇಗೌಡ ಅವರ ಪುತ್ರ ಜಿ.ಹೆಚ್.ವೆಂಕಟೇಶ್ ಗೌಡ ಅವರು ಶೃಂಗೇರಿ ವಿಧಾನಸಭಾ ಕ್ಷೇತ್ರದ ಅನೇಕ ಮುಖಂಡರೊಂದಿಗೆ ಪಕ್ಷಕ್ಕೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿ.ಹೆಚ್.ವೆಂಕಟೇಶ್ ಗೌಡ, ದೇವೇಗೌಡರ ನಾಯಕತ್ವ, ಕಾವೇರಿ ಹೋರಾಟದಲ್ಲಿ ಅವರು ತೆಗೆದುಕೊಂಡ ನಿಲುವು ಮೆಚ್ಚುಗೆಗೆ ಪಾತ್ರವಾಗಿದೆ. ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು ಶಕ್ತಿ ಮೀರಿ ಪ್ರಯತ್ನ ನಡೆಸುತ್ತೇವೆ. ನಮ್ಮ ತಂದೆ ಗೋವಿಂದೇಗೌಡರು ದೇವೇಗೌಡರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರಂತೆಯೇ ಉತ್ತಮ ಕೆಲಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ ಎಂದು ತಿಳಿಸಿದರು.
