ತಂದೆಯ ಹಾದಿಯಲ್ಲೇ ನಡೆದಿರುವ ಎಚ್.ಡಿ ಕುಮಾರಸ್ವಾಮಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಇವತ್ತು ಎರಡನೇ ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
ಮಂಡ್ಯ (ಮೇ.25): ಪ್ರತೀ ವರ್ಷದಂತೆ ಈ ವರ್ಷವೂ ದೇವೇಗೌಡರ ಕುಟುಂಬ ಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡಿದೆ.
ಮೂರು ಬಾರಿ ಅಮಾವಾಸ್ಯೆ ಪೂಜೆ ಮಾಡಿದರೆ ಇಷ್ಟಾರ್ಥ ಸಿದ್ಧಿಯಾಗುತ್ತೆ ಎಂಬ ನಂಬಿಕೆ ಇದೆ. ಈ ಹಿಂದೆ ದೇವೇಗೌಡರು 3 ಬಾರಿ ಅಮಾವಾಸ್ಯೆ ಪೂಜೆ ನೆರವೇರಿಸಿದ್ದರು.
ತಂದೆಯ ಹಾದಿಯಲ್ಲೇ ನಡೆದಿaರುವ ಎಚ್.ಡಿ ಕುಮಾರಸ್ವಾಮಿ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಚುಂಚನಗಿರಿ ಕ್ಷೇತ್ರಕ್ಕೆ ಭೇಟಿ ನೀಡಿ ಇವತ್ತು ಎರಡನೇ ಅಮಾವಾಸ್ಯೆ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
ದಂಪತಿ ಸಮೇತರಾಗಿ ಶ್ರೀಕ್ಷೇತ್ರಕ್ಕೇ ಭೇಟಿ ನೀಡಿರುವ ಎಚ್’ಡಿಕೆ ಕುಟುಂಬ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗಿದೆ. ಈ ಮೂಲಕ ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಕುಮಾರಸ್ವಾಮಿ ದೇವರ ಮೊರೆ ಹೋಗಿದ್ದಾರೆ.
