ಕುಟುಂಬದಿಂದ 3ನೇ ವ್ಯಕ್ತಿಗೆ ಟಿಕೆಟ್: ಹೆಚ್'ಡಿಕೆ ವಿಭಿನ್ನ ಹೇಳಿಕೆ

First Published 3, Mar 2018, 6:29 PM IST
HDK Speak About Family Politics
Highlights

ಪಕ್ಷದಲ್ಲಿ ಯಾರು ಬೇಕಾದರೂ ಟಿಕೆಟ್ ಕೇಳಬಹುದು. ಅವರಿಗೆ ಗೆಲ್ಲುವ ಸಾಮರ್ಥ್ಯವಿದ್ದರೆ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ'ಎಂದು ಅಚ್ಚರಿಯ ಹೇಳಿಕೆ ನೀಡಿದರು.

ಮಂಡ್ಯ/ಮೈಸೂರು(ಮಾ.03): ದೇವೇಗೌಡರ ಕುಟುಂಬದಿಂದ ಮೂರನೇ ವ್ಯಕ್ತಿ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಭಿನ್ನ ಹೇಳಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಪ್ರಜ್ವಲ್ ರೇವಣ್ಣ ರಾಜರಾಜೇಶ್ವರಿ ನಗರದಲ್ಲಿ ಸ್ಪರ್ಧಿಸುವುದಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಟಿಕೆಟ್ ಬೇಕು ಅಂತ ಅಪೇಕ್ಷ ಪಡುವಲ್ಲಿ ತಪ್ಪೇನಿಲ್ಲ. ರಾಜರಾಜೇಶ್ವರಿ ನಗರದಲ್ಲಿ ಇನ್ನು ಅಭ್ಯರ್ಥಿ ಫೈನಲ್ ಆಗಿಲ್ಲ. ಹಾಗಾಗಿ ಅವರು ಟಿಕೆಟ್ ಕೇಳುತ್ತಿದ್ದಾರೆ. ಆ ಬಗ್ಗೆ ಪಕ್ಷದ ಒಳಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಪಕ್ಷದಲ್ಲಿ ಯಾರು ಬೇಕಾದರೂ ಟಿಕೆಟ್ ಕೇಳಬಹುದು. ಅವರಿಗೆ ಗೆಲ್ಲುವ ಸಾಮರ್ಥ್ಯವಿದ್ದರೆ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ'ಎಂದು ಅಚ್ಚರಿಯ ಹೇಳಿಕೆ ನೀಡಿದರು.

ಕುಟುಂಬದಲ್ಲಿ ಇಬ್ಬರು ಮಾತ್ರ ಸ್ಪರ್ಧೆ

ಶ್ರೀರಂಗಪಟ್ಟಣದಲ್ಲಿ ಇದೇ ವಿಚಾರವಾಗಿ ಮಾತನಾಡಿ, ನಮ್ಮ ಕುಟುಂಬದಲ್ಲಿ ಇಬ್ಬರು ಮಾತ್ರ ರಾಜಕೀಯ ಕಣದಲ್ಲಿ ಇರ್ತಾರೆ. ಒಂದು ವೇಳೆ ನಮ್ಮ ಕುಟುಂಬದಿಂದ ಮೂರನೇ ಅಭ್ಯರ್ಥಿ ಬರ್ತಾರೆ ಅಂದ್ರೆ ನಾನೇ ರಾಜಕೀಯ ನಿವೃತ್ತಿ ಪಡೀತ್ತೀನಿ. ನಮ್ಮ ಕುಟುಂಬವನ್ನು ಯಾರು ಒಡೆಯಲು ಸಾಧ್ಯವಿಲ್ಲ. ಅದಕ್ಕೆ ನಾನು ಬಿಡುವುದು ಇಲ್ಲ' ಎಂದು ಆಕ್ರೋಶ ವ್ಯಕ್ತಪಡಿಸಿದರು.

loader