ಉಸಿರಾಟದ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿಲ್ಲ.

ಬೆಂಗಳೂರು(ಮಾ.04): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಆರೋಗ್ಯದಲ್ಲಿ ಏರುಪೇರಾಗಿ ದಿಢೀರ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಮ್ಮು ಮತ್ತು ಜ್ವರ ಇರುವುದರಿಂದ ಆಸ್ಪತ್ರೆಗೆ ದಾಖಲಾಗಿದ್ದು, ಉಸಿರಾಟದ ಹಾಗೂ ಹೃದಯ ಸಂಬಂಧಿ ಸಮಸ್ಯೆಯಿಲ್ಲ. ಪಕ್ಷದ ಕಾರ್ಯಕರ್ತರು ಯಾವುದೇ ಗಾಬರಿ ಪಡುವುದು ಬೇಡ. ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಪತ್ನಿ ಅನಿತಾ ಕುಮಾರ ಸ್ವಾಮಿ ತಿಳಿಸಿದ್ದಾರೆ.