ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕನೊಬ್ಬನನ್ನು ಹಾಡಹಗಲೇ ದುಷ್ಕರ್ಮಿಗಳು ರಸ್ತೆಯಲ್ಲೇ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಭಾರತೀನಗರದ ಅರೆಚಾಕನಹಳ್ಳಿ- ಗುಡಿಗೆರೆ ಬಳಿ ಇಂದು ಬೆಳಗ್ಗೆ ನಡೆದಿದೆ.

ಮಂಡ್ಯ (ಮಾ.31): ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕನೊಬ್ಬನನ್ನು ಹಾಡಹಗಲೇ ದುಷ್ಕರ್ಮಿಗಳು ರಸ್ತೆಯಲ್ಲೇ ಕತ್ತು ಕೊಯ್ದು ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕು ಭಾರತೀನಗರದ ಅರೆಚಾಕನಹಳ್ಳಿ- ಗುಡಿಗೆರೆ ಬಳಿ ಇಂದು ಬೆಳಗ್ಗೆ ನಡೆದಿದೆ.

ಮಂಡ್ಯದ ಸ್ವರ್ಣಸಂದ್ರ ಬಡಾವಣೆಯ ನಿವಾಸಿ, ಬಿದರಹೊಸಹಳ್ಳಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕ ಶಶಿಭೂಷಣ್ (೩೫) ಕೊಲೆಯಾದವರು. ಮಂಡ್ಯದ ಸ್ವರ್ಣಸಂದ್ರ ಬಡಾವಣೆಯಿಂದ ಪಲ್ಸರ್ ಬೈಕ್‌ನಲ್ಲಿ ಶುಕ್ರವಾರ ಬೆಳಗ್ಗೆ 9.30 ರ ಸಮಯದಲ್ಲಿ ಶಾಲೆಗೆಂದು ಕರಡಕೆರೆ, ಅರೆಚಾಕನಹಳ್ಳಿ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ಅಪರಿಚಿತರು ಬೈಕ್ ಅಡ್ಡಗಟ್ಟಿ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಸಾರ್ವಜನಿಕರು ತಕ್ಷಣ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದಾರೆ. ಶಾಲಾ ಶಿಕ್ಷಕ ಕಾಳಪ್ಪ ದೂರು ನೀಡಿದ್ದಾರೆ. ಕೊಲೆಗೆ ಕಾರಣ ತಿಳಿದುಬಂದಿಲ್ಲ.