Asianet Suvarna News Asianet Suvarna News

ವಿದ್ಯಾರ್ಥಿಯನ್ನೇ ಕಾಮತೃಷೆಗೆ ಬಳಸಿಕೊಂಡ ಮುಖ್ಯಶಿಕ್ಷಕ

ದುಗ್ಗಪ್ಪ ಎಂಬ ಮುಖ್ಯ ಶಿಕ್ಷಕನಿಂದಲೇ ಕೃತ್ಯ ನಡೆದಿರುವ ಬಗ್ಗೆ ಬಾಲಕಿಯ ತಾಯಿ ಆರೋಪಿಸಿದ್ದು, ಬಗ್ಗೆ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Headmaster sexually torture his student

ತನ್ನ ಅಪ್ರಾಪ್ತ ವಿದ್ಯಾರ್ಥಿನಿಯನ್ನೆ ಮುಖ್ಯಶಿಕ್ಷಕ ಲೈಂಗಿಕವಾಗಿ ಬಳಸಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಗುಜ್ಜೆಪಲ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ದುಗ್ಗಪ್ಪ ಎಂಬ ಮುಖ್ಯ ಶಿಕ್ಷಕನಿಂದಲೇ ಈ ಕೃತ್ಯ ನಡೆದಿರುವ ಬಗ್ಗೆ ಬಾಲಕಿಯ ತಾಯಿ ಆರೋಪಿಸಿದ್ದು, ಈ ಬಗ್ಗೆ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಕ್ಸೋ ಕಾಯ್ಸೆಯಡಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿ ಶಿಕ್ಷಕ ದುಗ್ಗಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಈ ಶಿಕ್ಷಕನ್ನು ಅಮಾನತುಗೊಳಿಸಿ ಚಿಕ್ಕಬಳ್ಳಾಪುರ ಡಿಡಿಪಿಐ ಅಶ್ವಥ್ ರೆಡ್ಡಿ ಅಮಾತುಗೊಳಿಸಿ ಆದೇಶಸಿದ್ದಾರೆ. ಇನ್ನೂ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ಪಡೆದು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿಸುತ್ತಿದ್ದಾರೆ.

Follow Us:
Download App:
  • android
  • ios