ಬಹು ಅಂಗಾಂಗ ವೈಫಲ್ಯದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಕಲಿ ಛಾಪಾ ಕಾಗದ ಹಗರಣದ ಪ್ರಮುಖ ಅಪರಾಧಿ ಅಬ್ದುಲ್ ಕರೀಂ ಲಾಲ್ ತೆಲಗಿ ಆರೋಗ್ಯದಲ್ಲಿ ಏರುಪೇರಾಗಿದೆ.
ಬೆಂಗಳೂರು(ಅ.24): ಬಹು ಅಂಗಾಂಗ ವೈಫಲ್ಯದಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಕಲಿ ಛಾಪಾ ಕಾಗದ ಹಗರಣದ ಪ್ರಮುಖ ಅಪರಾಧಿ ಅಬ್ದುಲ್ ಕರೀಂ ಲಾಲ್ ತೆಲಗಿ ಆರೋಗ್ಯದಲ್ಲಿ ಏರುಪೇರಾಗಿದೆ.
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿರುವ ತೆಲಗಿಯನ್ನು ಅಕ್ಟೋಬರ್ 16ರಂದು ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದ್ದು. ನಿನ್ನೆ ರಾತ್ರಿ 8 ಗಂಟೆಯಿಂದ ತೆಲಗಿ ಆರೋಗ್ಯದಲ್ಲಿ ತೀವ್ರ ಏರುಪೇರಾಗಿದೆ.
ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ, ವೆಂಟಿಲೇಟರ್ ಮೂಲಕ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಅಪರಾಧಿ ತೆಲಗಿ 2001ರಲ್ಲಿ ಬೆಳಕಿಗೆ ಬಂದಿದ್ದ ನಕಲಿ ಛಾಪಾ ಕಾಗದ ಹಗರಣದ ಸಂಬಂಧ ತೆಲಗಿ ಮತ್ತು ಆತನ ಸಹಚರರ ವಿರುದ್ಧ ದೆಹಲಿ, ಅಹಮದಾಬಾದ್, ಮಹಾರಾಷ್ಟ್ರ ಮತ್ತು ತಮಿಳುನಾಡುಗಳಲ್ಲಿ ಅನೇಕ ಪ್ರಕರಣಗಳು ದಾಖಲಾಗಿದ್ದು, ಇನ್ನೂ ವಿಚಾರಣೆಯ ಹಂತದಲ್ಲಿವೆ.
ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ತೆಲಗಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡಲಾಗಿದೆ ಎಂಬುದಾಗಿ ಕೂಡ ಆರೋಪಗಳು ಕೇಳಿಬಂದಿದ್ದವು. ತೆಲಗಿಯ ಆರೋಗ್ಯದಲ್ಲಿ ಭಾರೀ ಏರುಪೇರು ಆಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ತೆಲಗಿ ಸಾವನಪ್ಪಿಲ್ಲ ಎಂದು ತೆಲಗಿ ಕುಟುಂಬಸ್ಥರು ಸ್ಪಷ್ಟಪಡಿಸಿದ್ದಾರೆ.
