ಇಂದ್ರಾಣಿ ಆರೋಗ್ಯ ಸ್ಥಿತಿ ಗಂಭೀರ: ಜೀವರಕ್ಷಕ ವ್ಯವಸ್ಥೆಯಲ್ಲಿ ಚಿಕಿತ್ಸೆ

First Published 9, Apr 2018, 10:04 AM IST
Health Problem To Indrani Mukherjee
Highlights

ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಮುಂಬೈ: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಶೀನಾ ಬೋರಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಇಂದ್ರಾಣಿ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

ಔಷಧಿಗಳ ಅಧಿಕ ಸೇವನೆಯಿಂದ ಇಂದ್ರಾಣಿ ಅನಾರೋಗ್ಯಕ್ಕೆ ತುತ್ತಾಗಿರಬಹುದು ಎಂದು ಪ್ರಾಥಮಿಕ ತನಿಖೆ ತಿಳಿಸಿದೆ. ಶುಕ್ರವಾರ ತಡರಾತ್ರಿ ಅನಾರೋಗ್ಯಕ್ಕೆ ತುತ್ತಾಗಿದ್ದ ಇಂದ್ರಾಣಿಯನ್ನು ಇಲ್ಲಿನ ಜೆ.ಜೆ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರದಿಂದಲೂ ಅವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡುಬಂದಿಲ್ಲ.

ಸದ್ಯ ಅವರನ್ನು ಜೀವರಕ್ಷಕ ವ್ಯವಸ್ಥೆಯಡಿ ಇಡಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಈಗಾಗಲೇ ಎಂಆರ್‌ಐ, ಸಿಟಿ ಸ್ಕಾ್ಯನ್‌ ಮಾಡಲಾಗಿದೆ. ಮೆದುಳಿಗೆ ಸರಿಯಾದ ರೀತಿಯಲ್ಲಿ ರಕ್ತ ಸಂಚಲನವಾಗುತ್ತಿಲ್ಲ ಎಂಬುದು ಖಚಿತವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 2015ರಲ್ಲೂ ಇದೇ ರೀತಿ ಡ್ರಗ್‌ ಓವರ್‌ಡೋಸ್‌ ಆಗಿ ಒಂದು ವಾರದ ಕಾಲ ಇಂದ್ರಾಣಿ ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

 

loader