‘ಡೀಲ್’ ಮಾಡಿ ಬಂಧನದ ಭೀತಿ ಎದುರಿಸುತ್ತಿರುವ ಪ್ರಭಾವಿ ರಾಜಕಾರಣಿ ಜನಾರ್ದನ ರೆಡ್ಡಿ | ತಲೆಮರೆಸಿಕೊಂಡಿರುವ ರೆಡ್ಡಿಯಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ  

ಬೆಂಗಳೂರು: ಪ್ರಕರಣವೊಂದನ್ನು ಮುಚ್ಚಿಹಾಕಲು ತನಿಖಾಸಂಸ್ಥೆ ಜೊತೆ ಡೀಲ್ ಮಾಡಲು ಹೋಗಿ ಬಂಧನದ ಭೀತಿ ಎದುರಿಸುತ್ತಿರುವ ಪ್ರಭಾವಿ ರಾಜಕಾರಣಿ ಜನಾರ್ದನ ರೆಡ್ಡಿಯ ಜಾಮೀನು ಅರ್ಜಿ ವಿಚಾರಣೆ ಮುಂದೂಡಲಾಗಿದೆ.

Add Asianetnews Kannada as a Preferred SourcegooglePreferred

ರೆಡ್ಡಿ ಪರ ವಕೀಲ ಸಿ.ಎಚ್.ಹನುಮಂತರಾಯ ಸಿಟಿ ಸಿವಿಲ್ ಕೋರ್ಟ್‌ನಲ್ಲಿ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಅರ್ಜಿಯನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.

ಇದನ್ನೂ ಓದಿ: ಜನಾರ್ದನ ರೆಡ್ಡಿ ತಲೆಮರೆಸಿಕೊಂಡಿದ್ದೇಕೆ? ವಕೀಲ ಬಿಚ್ಚಿಟ್ರು ಕಾರಣ

ಅರ್ಜಿ ಮುಂದೂಡಲ್ಪಟ ಹಿನ್ನೆಲೆಯಲ್ಲಿ ಜನಾರ್ಧನ ರೆಡ್ಡಿಗೆ ಬಂಧನದ ಭೀತಿ ಮುಂದುವರೆದಿದೆ. 

ಆ್ಯಂಬಿಡೆಂಟ್ ಕಂಪನಿಯ ಡೀಲ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ, ಇದೀಗ ತಲೆಮರೆಸಿಕೊಂಡಿದ್ದು ಸಿಸಿಬಿ ಪೊಲೀಸರು ಪತ್ತೆಗಾಗಿ ಬಲೆ ಬೀಸಿದ್ದಾರೆ. ವಿಚಾರಣೆಗಾಗಿ ಹಾಜರಾಗುವಂತೆ ಸಿಸಿಬಿ ನೊಟೀಸ್ ಕೂಡಾ ಜಾರಿಮಾಡಿದೆ.