ಶನಿವಾರದಿಂದ ಅಮೃತಸರ್ ನಲ್ಲಿ ಪ್ರಾರಂಭವಾಗಲಿರುವ ಹಾರ್ಟ್ ಆಫ್ ಏಷಿಯಾ ಸಮ್ಮೇಳನದ ದ್ವಿಪಕ್ಷೀಯ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಪಾಕ್ ನಿಂದ ಮನವಿ ಬಂದಿಲ್ಲವೆಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿ (ನ.30): ಶನಿವಾರದಿಂದ ಅಮೃತಸರ್ ನಲ್ಲಿ ಪ್ರಾರಂಭವಾಗಲಿರುವ ಹಾರ್ಟ್ ಆಫ್ ಏಷಿಯಾ ಸಮ್ಮೇಳನದ ದ್ವಿಪಕ್ಷೀಯ ಸಭೆಯಲ್ಲಿ ಭಾಗವಹಿಸುವ ಬಗ್ಗೆ ಪಾಕ್ ನಿಂದ ಮನವಿ ಬಂದಿಲ್ಲವೆಂದು ವಿದೇಶಾಂಗ ಇಲಾಖೆ ವಕ್ತಾರ ವಿಕಾಸ್ ಸ್ವರೂಪ್ ಸ್ಪಷ್ಟಪಡಿಸಿದ್ದಾರೆ.
ಈ ಸಮ್ಮೇಳನದಲ್ಲಿ 40 ದೇಶಗಳ ಸಚಿವರು ಭಾಗವಹಿಸಲಿದ್ದು ಶಾಂತಿ, ಸಹಕಾರ ಹಾಗೂ ಆರ್ಥಿಕ ಅಭಿವೃದ್ಧಿ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ಈ ಮಾತುಕತೆಯಲ್ಲಿ ಪಾಕ್ ಭಾಗವಹಿಸುವುದು ಅನುಮಾನವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಹಾಗೂ ಅಫ್ಘಾನಿಸ್ತಾನ ಅಧ್ಯಕ್ಷ ಅಶ್ರಫ್ ಘಾನಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅನಾರೋಗ್ಯ ಹಿನ್ನೆಲೆಯಲ್ಲಿ ವಿತ್ತ ಸಚಿವ ಅರುಣ್ ಜೇಟ್ಲಿ ಉಪಸ್ಥಿತರಿರಲಿದ್ದಾರೆ.
