ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ ಕುಮಾರಸ್ವಾಮಿಗೆ ಇಂದು ಹೃದಯದ ಶಸ್ತ್ರಚಿಕಿತ್ಸೆ ನಡೆಯಲಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ  ಕುಮಾರಸ್ವಾಮಿಗೆ ನಿನ್ನೆ ಶಸ್ತ್ರಚಿಕಿತ್ಸೆ ಪೂರ್ವ ಪರೀಕ್ಷೆ ನಡೆಸಲಾಗಿದೆ.

ಬೆಂಗಳೂರು(ಸೆ.23): ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ಡಿ ಕುಮಾರಸ್ವಾಮಿಗೆ ಇಂದು ಹೃದಯದ ಶಸ್ತ್ರಚಿಕಿತ್ಸೆ ನಡೆಯಲಿದೆ. ಬನ್ನೇರುಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಕುಮಾರಸ್ವಾಮಿಗೆ ನಿನ್ನೆ ಶಸ್ತ್ರಚಿಕಿತ್ಸೆ ಪೂರ್ವ ಪರೀಕ್ಷೆ ನಡೆಸಲಾಗಿದೆ.

ಇಂದು ಬೆಳಿಗ್ಗೆ ಎಂಟು ಗಂಟೆಗೆ ಕುಮಾರಸ್ವಾಮಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಡಾ ಸತ್ಯಕಿ ಅವರ ನೇತೃತ್ವದ ತಂಡ ಶಸ್ತ್ರಚಿಕಿತ್ಸೆ ಮಾಡಲಿದೆ. ಹತ್ತು ವರ್ಷಗಳ ಮುಂಚೆ ಅಳವಡಿಸಲಾಗಿದ್ದ ಟಿಶ್ಯೂವಾಲ್ವ್ ಅನ್ನು ಬದಲಾಯಿಸಲು ವೈದ್ಯರು ಸೂಚಿಸಿರುವ ಹಿನ್ನಲೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿದೆ. ಕುಮಾರಸ್ವಾಮಿಯವರನ್ನು ನೋಡಲು ಅಭಿಮಾನಿಗಳು, ಕಾರ್ಯಕರ್ತರು, ಹಾಗೂ ಮಾದ್ಯಮದವರೆಲ್ಲರಿಗೂ ನಿರ್ಬಂಧ ವಿಧಿಸಲಾಗಿದೆ. 

ಶಸ್ತ್ರ ಚಿಕಿತ್ಸೆಯ ನಂತರ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆಯಲಿರುವ ಕುಮಾರಸ್ವಾಮಿ ನಂತರ ಮನೆಗೆ ತೆರಳಲಿದ್ದಾರೆ ಅಂತಾ ಆಸ್ಪತ್ರೆಯ ಮೂಲಗಳು ತಿಳಿಸಿವೆ.