ಪಟನಾ [ಜೂ.17] : ಬಿಹಾರದಲ್ಲಿ ಭಾರೀ ಬಿಸಿಲಿನ ಝಳಕ್ಕೆ ಶನಿವಾರ ಒಂದೇ ದಿನ ರಾಜ್ಯದ ವಿವಿಧ ಭಾಗಗಳಲ್ಲಿ 61 ಜನ ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 4 ಲಕ್ಷ  ರು. ಪರಿಹಾರ ಘೋಷಿಸಲಾಗಿದೆ. 

ಔರಂಗಾಬಾದ್‌ನಲ್ಲಿ 30, ಗಯಾದಲ್ಲಿ 20, ನವಾಡಾದಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ. ಶನಿವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ 40 ಡಿ.ಸೆ.ನಿಂದ,  45.8 ಡಿ. ಸೆವರೆಗೂ ಉಷ್ಣಾಂಶ ದಾಖಲಾಗಿದೆ. ಇದು ಕಳೆದ 10 ಬವರ್ಷಗಳಲ್ಲಿ ರಾಜ್ಯದಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಪಟನಾ: ಇತ್ತ ದಕ್ಷಿಣ ಭಾರತದಲ್ಲಿ ಮುಂಗಾರು ಕುಂಠಿತವಾಗಿರುವಾಗಲೇ, ಅತ್ತ ಉತ್ತರಭಾರತ ದಲ್ಲಿ ಸುಡುಬಿಸಿಲು ಮುಂದುವರೆದಿದೆ. ಬಿಹಾರ ದಲ್ಲಿ ಬಿಸಿಲಿನ ಹೊಡೆತ ತಾಳಲಾಗದೇ ಶನಿವಾರ ಒಂದೇ ದಿನ ರಾಜ್ಯದ ವಿವಿಧ ಭಾಗಗಳಲ್ಲಿ ಕನಿಷ್ಠ 61 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಅವರು ಮೃತರ ಕುಟುಂಬಗಳಿಗೆ ತಲಾ 4 ಲಕ್ಷ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಸುಡುಬಿಸಿಲು ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮ ಹಾಗೂ ಬಿಸಿಲಿನ ಹೊಡೆತಕ್ಕೆ ಸಿಲುಕಿದವರ ವೈದ್ಯಕೀಯ ಚಿಕಿತ್ಸೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಭಾರೀ ಉಷ್ಣಾಂಶ ಕಂಡುಬಂದ ಔರಂಗಾಬಾದ್‌ನಲ್ಲಿ 30, ಗಯಾದಲ್ಲಿ 20, ನವಾಡಾ ಜಿಲ್ಲೆಯಲ್ಲಿ 11 ಮಂದಿ ಸಾವಿಗೀಡಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಶನಿವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ 40 ಡಿ.ಸೆ.ನಿಂದ, 45.8 ಡಿ. ಸೆವರೆಗೂ ಉಷ್ಣಾಂಶ ದಾಖಲಾಗಿದೆ. ಇದು ಕಳೆದ 10 ವರ್ಷಗಳಲ್ಲಿ ದಾಖಲಾದ ಗರಿಷ್ಠ ಉಷ್ಣಾಂಶ ಎಂದು ಹವಾಮಾನ ಇಲಾಖೆ ತಿಳಿಸಿದೆ.