ಮುಂಬೈ : ಅಗತ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಸುರಿದ ಮಳೆಯಿಂದ ಕಂಗಾಲಾಗಿದ್ದ ಜನತೆಗೆ ಹವಾಮಾನ ಇಲಾಖೆ ಭಾರಿ ಮಳೆ ಮುನ್ಸೂಚನೆ ನೀಡಿದೆ.  ಮುಂದಿನ ವಾರ ಮುಂಗಾರು ಮಳೆ ಮುಕ್ತಾಯವಾಗಲಿದ್ದು ಈ ವೇಳೆ ಕೆಲವು ಪ್ರದೆಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. 

ಸೆಪ್ಟೆಂಬರ್ 19ರ ನಂತರ ಮಹಾರಾಷ್ಟ್ರದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಆಗಸ್ಟ್ ತಿಂಗಳ ಕೊನೆಯಲ್ಲಿ  ಮಾತ್ರವೇ ಮಹಾರಾಷ್ಟ್ರದಲ್ಲಿ  ಮಳೆಯಾಗಿದೆ ಸ್ವಲ್ಪ ಪ್ರಮಾಣದಲ್ಲಿ ಸುರಿದಿದೆ.  

ಇದುವರೆಗೂ ಸುರಿದ ಮಳೆ ಸಾಮಾನ್ಯ ಪ್ರಮಾಣದಲ್ಲಿದ್ದು ಸೆಪ್ಟೆಂಬರ್ ಕೊನೆಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.