ಗುರುಗ್ರಾಮ:  ಈಗಾಗಲೇ ಕೇರಳ ಹಾಗೂ ಕರ್ನಾಟಕದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ದೇಶದಲ್ಲಿ ಮತ್ತೊಂದು ನಗರದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದು ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. 

ಗುರುಗ್ರಾಮದಲ್ಲಿ ಅತ್ಯಧಿಕ ಪ್ರಮಾಣದಲ್ಲಿ ಮಳೆ ಸುರಿಯುವ ಮೂಲಕ ಹಲವು ಪ್ರದೇಶಗಳು ನೀರಿನಿಂದಾವೃತವಾಗಿವೆ. ನಗರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. 

ಇದರಿಂದ ಹಲವು ಪ್ರದೇಶಗಳಲ್ಲಿ ಭಾರೀ ಟ್ರಾಫಿಕ್ ಜಾಂ ಉಂಟಾಗಿ, ವಾಹನ ಸಂಚಾರವೇ ಸಾಧ್ಯವಿಲ್ಲದಂತಹ ಪರಿಸ್ಥಿತಿ ಎದುರಾಗಿದೆ. ಇದರಿಂದ ಡೆಲ್ಲಿ - ಜೈಪುರ್ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದೆ. 

ಇಲ್ಲಿನ ಹಲವು ನಿವಾಸಿಗಳು ಟ್ವಿಟ್ಟರ್ ಮೂಲಕ ನೀರು ನುಗ್ಗಿರುವ ಚಿತ್ರಗಳನ್ನು ಪೋಸ್ಟ್ ಮಾಡಿದ್ದಾರೆ.