Asianet Suvarna News Asianet Suvarna News

ಕರಾವಳಿ - ಮಲೆನಾಡಿನಲ್ಲಿ ಭಾರೀ ಮಳೆ

ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಬಗ್ಗೆ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ. 

Heavy Monsoon Rain To Lash In Malnadu Coastal Districts Karnataka
Author
Bengaluru, First Published Aug 3, 2019, 11:08 AM IST

ಬೆಂಗಳೂರು [ಆ.03]:  ರಾಜ್ಯದ ಕರಾವಳಿ, ಮಲೆನಾಡು ಭಾಗಗಳಲ್ಲಿ ಶನಿವಾರ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಪ್ರಕಟಣೆ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಶನಿವಾರದಿಂದ ಎರಡು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಇದರಿಂದ ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಇನ್ನು ದಕ್ಷಿಣ ಒಳನಾಡಿನಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು. ಸೋಮವಾರದ ಬಳಿಕ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು ತಿಳಿಸಿದರು.

ಭಾರತೀಯ ಹವಾಮಾನ ಇಲಾಖೆಯು ಆಗಸ್ಟ್‌ನ ಕಡೆಯ ಎರಡು ವಾರ ದಕ್ಷಿಣದ ರಾಜ್ಯಗಳಲ್ಲಿ ಉತ್ತಮ ಮಳೆಯಾಗುವ ಸೂಚನೆ ನೀಡಿದೆ. ಸೆಪ್ಟೆಂಬರ್‌ನಲ್ಲಿ ರಾಜ್ಯದ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದರು.

Follow Us:
Download App:
  • android
  • ios