ಭಾರೀ ಪ್ರಮಾಣದಲ್ಲಿ ಸುರಿದು ಅವಾಂತರ ಸೃಷ್ಟಿಸಿದ್ದ ಮಳೆ ಇದೀಗ ಮತ್ತೊಮ್ಮೆ ಅಬ್ಬರಿಸಲು ಸಜ್ಜಾಗಿದ್ದಾನೆ. ಈ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಲಕ್ನೋ : ದಕ್ಷಿಣದಲ್ಲಿ ಸುರಿದು ಅವಾಂತರ ಸೃಷ್ಟಿಸಿದ್ದ ಮಳೆರಾಯ ಇದೀಗ ಉತ್ತರದಲ್ಲಿ ತನ್ನ ಅಬ್ಬರವನ್ನು ಆರಂಭಿಸಿದ್ದಾರೆ. ಈಗಾಗಲೇ ಉತ್ತರ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಈಗಾಗಲೇ ಸಾವಿನ ಸಂಖ್ಯೆ 44ಕ್ಕ ಏರಿಕೆಯಾಗಿದೆ. ಅಲ್ಲದೇ ಮಳೆಯಿಂದ ಹೆಚ್ಚಿನ ಸಂಖ್ಯೆಯ್ಲಿ ಗಾಯಗೊಂಡಿದ್ದಾರೆ. 

ಇದೀಗ ಮತ್ತೊಮ್ಮೆ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಲಿದ್ದು ಇನ್ನು 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ನಿಟ್ಟಿನಲ್ಲಿ ಜನರು ತೀವ್ರ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚನೆ ನೀಡಲಾಗಿದೆ. 

ರಾಜ್ಯದ ವಿವಿಧ ಪ್ರದೇಶಗಳಲ್ಲಿ ಸುರಿದ ಮಳೆಯಿಂದ 36ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಂಗಾ ಸೇರಿದಂತೆ ವಿವಿಧ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. 

ಈಗಾಗಲೇ ಅನೇಕ ಪ್ರದೇಶಗಳು ನೀರಿನಿಂದಾವೃತವಾಗಿದ್ದು, ಜನರನ್ನು ಸ್ಥಳಾಂತರಿಸಲಾಗಿದೆ. 

Scroll to load tweet…