ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿ ನ ಒಂದು ವಾರ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮುಂದಿ ನ ಒಂದು ವಾರ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ. ಈ ಮಧ್ಯೆ, ಹವಾಮಾನ ಇಲಾಖೆ ಮೇ 11 ಮತ್ತು 12 ರಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜ ನಗರ, ಹಾಸನ, ಗದಗ ಮತ್ತು ಶಿವಮೊಗ್ಗ ಜಿಲ್ಲೆಗಳ ವಿವಿಧೆಡೆ ಶುಕ್ರವಾರ ಮತ್ತು ಶನಿವಾರ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಇದು ಮೇ 12 ರಂದು ನಡೆಯುವ ಚುನಾವಣಾ ಮತದಾನದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಏರ್ಪಟ್ಟಿರುವು ದರಿಂದ ಉತ್ತರ ಕರ್ನಾಟಕ ಭಾಗದಿಂದ ತಮಿಳುನಾಡಿನ ದಕ್ಷಿಣ ಭಾಗದವರೆಗೆ ವಾತಾವರಣದಲ್ಲಿ ಗಾಳಿಯ ಒತ್ತಡ ಕಡಿಮೆಯಾಗಿದೆ. ಇದು ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರ ಎರಡೂ ಕಡೆಗಳಿಂದ ತೇವಾಂಶಯುಕ್ತ ಮೋಡಗಳನ್ನು ಒಳನಾಡಿನೊಳಗೆ ಚಲಿಸುವಂತೆ ಮಾಡುತ್ತದೆ.
ಇದರಿಂದ ಮುಂದಿನ ಏಳು ದಿನಗಳ ಕಾಲ ಕೆಲವೆಡೆ ಭಾರೀ ಮಳೆ ಸೇರಿದಂತೆ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ವಿವಿಧೆಡೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸರೆಡ್ಡಿ ‘ಕನ್ನಡಪ್ರಭ’ಗೆ ಮಾಹಿತಿ ನೀಡಿದ್ದಾರೆ.
ಮಳೆ ಅಬ್ಬರ: ಗುರುವಾರ ರಾತ್ರಿ ಚಿತ್ರದುರ್ಗ ಜಿಲ್ಲೆಯಾದ್ಯಂತ ಮಳೆಯಾ ಗಿದ್ದು, ಜಿಲ್ಲೆಯಲ್ಲಿ 87 ಮಿ.ಮೀ.ವರೆಗೂ ಗರಿಷ್ಠ ಮಳೆ ದಾಖಲಾಗಿದೆ. ಹಾಸನ 74 ಮಿ.ಮೀ, ಶಿವಮೊಗ್ಗ 63 , ಬೆಂಗಳೂರು ನಗರ 52 ಮಿ.ಮೀ ಮಳೆ ಬಿದ್ದಿದೆ.

Last Updated 11, May 2018, 9:18 AM IST