ಈಗಾಗಲೇ ಭಾರೀ ಪ್ರಮಾಣದಲ್ಲಿ ಅಬ್ಬರಿಸಿ ತಣ್ಣಗಾಗಿದ್ದ ಮಳೆ ಮತ್ತೆ ಅಬ್ಬರಿಸಲು ಸಜ್ಜಾಗಿದೆ. ಕರಾವಳಿ ಹಾಗೂ ಕೆಲ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ, 

ಬೆಂಗಳೂರು: ಈಗಾಗಲೇ ರಾಜ್ಯದ ವಿವಿಧೆಡೆ ಅಬ್ಬರಿಸಿ ಆತಂಕ ಸೃಷ್ಟಿಸಿದ್ದ ಮಳೆರಾಯ ಇದೀಗ ಮತ್ತೆ ಅಬ್ಬರಿಸಲು ಸಜ್ಜಾಗಿದ್ದಾನೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಮುಂದಿನ 2 ದಿನಗಳಲ್ಲಿ ಅತೀ ಹೆಚ್ಚು ಮಳೆ ಬೀಳಲಿದೆ ಎಂದು ಎಚ್ಚರಿಸಲಾಗಿದೆ.

ಕರಾವಳಿಯ ಹಲವು ಜಿಲ್ಲೆಗಳಲ್ಲಿಯೂ ಕೂಡ ಭಾರಿ ಮಳೆಯಾಗಲಿದೆ. ಈ ನಿಟ್ಟಿನಲ್ಲಿ ಕರಾವಳಿಯಲ್ಲಿ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. 

ಇನ್ನು ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಒಳನಾಡಿನ ಬೆಂಗಳೂರು ನಗರ ಸುತ್ತ ಮೋಡ ಕವಿದ ವಾತಾವರಣ ಇರಲಿದೆ ಎಂದು ಎಚ್ಚರಿಕೆ ನೀಡಲಾಗಿದೆ.