ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆ ಭಾರೀ ಗಾಳಿ, ಗುಡುಗು ಸಹಿತ ಮಳೆ, ಸಂಚಾರ ಅಸ್ತವ್ಯಸ್ತ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗುತ್ತಿದೆ.

ಮೆಜಸ್ಟಿಕ್, ಮಲ್ಲೇಶ್ವರಂ, ಕಬ್ಬನ್ ಪಾರ್ಕ್, ಶಿವಾನಂದ ಸರ್ಕಲ್ ಹಾಗೂ ನಗರದ ವಿವಿಧ ಭಾಗಗಳಲ್ಲಿ ಗಾಳಿ, ಸಿಡಿಲು ಸಹಿತ ಮಳೆಯಾಗುತ್ತಿದೆ.

ರಾಜ್ಯದ ಇತರ ಭಾಗದಲ್ಲೂ ಮಳೆಯಾಗಿದೆ. ಬಿಸಿಲಿನಲ್ಲಿ ಕಂಗೆಟ್ಟಿದ್ದ ಧಾರವಾಡ, ಕುಂದಗೋಳ, ಕಲಘಟಗಿ ಜನರಿಗೆ ಮಳೆ ತಂಪಿನ ಸಿಂಚನ ಒದಗಿಸಿದೆ.

ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ.