ಮಹಾ ಮಳೆಗೆ ರಾಜ್ಯದಲ್ಲಿ ಪ್ರವಾಹ ಭೀತಿ

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 20, Jul 2018, 9:37 AM IST
Heavy Rain In Maharastra Flood Warning in Karnataka
Highlights

ವಿವಿಧೆಡೆ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಯ ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಇದರ ಪರಿಣಾಮ ಬೆಳಗಾವಿ ಜಿಲ್ಲೆಯ 13 ಸೇತುವೆಗಳು ಮುಳುಗಡೆಯಾಗಿದ್ದು, ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಬೆಂಗಳೂರು: ಬಹುದಿನಗಳಿಂದ ಅಬ್ಬರಿಸುತ್ತಿದ್ದ ಮಳೆರಾಯ ಗುರುವಾರ ರಾಜ್ಯಾದ್ಯಂತ ಬಿಡುವು ನೀಡಿದ್ದಾನೆ. ಅಲ್ಲಲ್ಲಿ ಅಲ್ಪ ಸ್ವಲ್ಪ ಪ್ರಮಾಣದಲ್ಲಿ ಮಾತ್ರ ಮಳೆ ಕಂಡುಬಂದಿದೆ. ನೆರೆಯ ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಯ ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಇದರ ಪರಿಣಾಮ ಬೆಳಗಾವಿ ಜಿಲ್ಲೆಯ 13 ಸೇತುವೆಗಳು ಮುಳುಗಡೆಯಾಗಿದ್ದು, ಅಲ್ಲಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಕಳೆದ ನಾಲ್ಕು ದಿನಗಳಿಂದ ಅಥಣಿ ಮತ್ತು ಚಿಕ್ಕೋಡಿ ಭಾಗದ ನಾಲ್ಕು ಸೇತುವೆಗಳು ಮುಳುಗಡೆಯಾಗಿದ್ದವು. ಬುಧವಾರ ಚಿಕ್ಕೋಡಿ ತಾಲೂಕಿನ ಕಲ್ಲೋಳ-ಯಡೂರ, ಕಾರದಗಾ- ಬೋಜ, ಬೋಜವಾಡಿ-ಕುನ್ನೂರ, ಸಿದ್ನಾಳ- ಅಕ್ಕೋಳ, ಜತ್ರಾಟ- ಭೀವಶಿ, ಮಲಿಕವಾಡ- ದತ್ತವಾಡ, ಅಥಣಿ ತಾಲೂಕಿನ ಉಗಾರ ಕೆ.ಎಚ್- ಉಗಾರ, ರಾಯಬಾಗ ತಾಲೂಕಿನ ಕುಡಚಿ -ಉಗಾರ, ಭಿರಡಿ -ಚಿಂಚಲಿ, ಗೋಕಾಕ ತಾಲೂಕಿನ ಚಿಗಡೊಳ್ಳಿ -ನಲ್ಲಾನಟ್ಟಿ, ಉದಗಟ್ಟಿ- ವಡೇರಹಟ್ಟಿ, ಮೂಡಲಗಿ ತಾಲೂಕಿನ ಸುಣಧೋಳಿ -ಮೂಡಲಗಿ, ಅವರಾಧಿ- ನಂದಗಾಂವ, ಸೇತುವೆಗಳು ಮುಳುಗಡೆಯಾಗಿವೆ. 

ಅಥಣಿ, ಚಿಕ್ಕೋಡಿ ಹಾಗೂ ರಾಯಬಾಗ ತಾಲೂಕುಗಳಲ್ಲಿ ಕೃಷ್ಣಾ ಹಾಗೂ ಉಪನದಿಗಳ ನೀರಿನ ಮಟ್ಟ ತೀವ್ರ ಏರಿಕೆಯಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಭೀತಿ ದಟ್ಟವಾಗತೊಡಗಿದೆ.

ಸಾಂದರ್ಬಿಕ ಚಿತ್ರ

loader