ಮುಂಬೈ(ಸೆ.31): ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಾಣಿಜ್ಯ ನಗರಿ ಮುಂಬೈ ತತ್ತರಿಸಿ ಹೋಗಿದೆ. ವಡಾಲ, ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಳೆ ನೀರಿನಿಂದಾಗಿ ರಸ್ತೆಗಳೆಲ್ಲ ನದಿಗಳಂತಾಗಿದ್ದು, ಮೊಣಕಾಲುದ್ದ ನೀರು ನಿಂತಿದೆ. ಇನ್ನೂ ರಸ್ತೆಗಳು ಜಲಾವೃತಗೊಂಡಿರುವುದರಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.

ಇನ್ನೂ ಮುಂದಿನ 2 ದಿನವೂ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಳೆದ 24 ಗಂಟೆಯಲ್ಲಿ ಸುಮಾರು 150 ಮಿಲಿ ಮೀಟರ್ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.