ದೇಶದ ವಿವಿಧ ನಗರಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದು ಆಪತ್ತು ತಂದಿಟ್ಟ ಬೆನ್ನಲ್ಲೇ ಇದೀಗ ರಾಷ್ಟ್ರ ರಾಜಧಾನಿಯಲ್ಲೂ ವರುಣ ಅಬ್ಬರಿಸುತ್ತಿದ್ದಾನೆ. ದಿಲ್ಲಿಯಲ್ಲಿ ಹೆಚ್ಚಿನ ಮಳೆ ಸುರಿಯುತ್ತಿದೆ.
ದಿಲ್ಲಿ : ಕೇರಳ ಕರ್ನಾಟಕದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಚೇತರಿಸಿಕೊಳ್ಳುತ್ತಿರುವ ಬೆನ್ನಲ್ಲೇ ಇದೀಗ ದೇಶದ ಬೇರೆ ಬೇರೆ ನಗರಳಲ್ಲಿ ವರುಣ ಅಬ್ಬರಿಸುತ್ತಿದ್ದಾನೆ.
ಇದೀಗ ರಾಷ್ಟ್ರ ರಾಜಧಾನಿ ಮೇಲೂ ವರುಣನ ಮುನಿಸು ಆರಂಭವಾಗಿದೆ. ದಿಲ್ಲಿಯಲ್ಲಿ ಭಾರೀ ಮಳೆ ಸುರಿದಿದೆ. ಇದರಿಂದ ಹಲವು ಪ್ರದೇಶಗಳು ನೀರಿನಿಂದಾವೃತವಾಗಿವೆ.
ಈಗಾಗಲೇ ಭಾರತೀಯ ಹವಾಮಾನ ಇಲಾಖೆ ಹಲವು ನಗರಗಳಲ್ಲಿ ಮುನ್ನೆಚ್ಚರಿಕೆ ಕೈಗೊಳ್ಳಲು ಸೂಚಿಸಿದೆ.
ಉತ್ತರಾಖಂಡ್, ಹರ್ಯಾಣ, ಚಂಡೀಗಢ, ದಿಲ್ಲಿ, ಉತ್ತರ ಪ್ರದೇಶ, ರಾಜಸ್ಥಾನ, ಮಧ್ಯ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
