ಬೆಂಗಳೂರು(ಸೆ. 25): ನಗರದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ಕುಂದಲಹಳ್ಳಿ ಗ್ರಾಮದ ಅನೇಕ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ತೀವ್ರ ತೊಂದರೆ ಅನುಭವಿಸಿದರು. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಕಳೆದ ಎರಡು ದಿನಗಳಿಂದ ನಗರದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಮಂಗಳವಾರ ಸಂಜೆ ಸುರಿದ ಮಳೆಗೆ ದೊಡ್ಡನೆಕ್ಕುಂದಿ ವಾರ್ಡ್‌ನ ಕುಂದಲಹಳ್ಳಿಯ ತಗ್ಗು ಪ್ರದೇಶದಲ್ಲಿ ನಿರ್ಮಿಸಿದ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ವಸ್ತುಗಳು ನೀರಿನಲ್ಲಿ ಕೊಚ್ಚಿಹೋಗಿರುವ ಬಗ್ಗೆ ವರದಿಯಾಗಿದೆ.

ಇನ್ನು ಹಲಸೂರು ಕೆರೆ ಬಳಿ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರಿಗೆ ತೊಂದರೆ ಉಂಟಾಗಿದೆ. ಲೆ ಮೆರಿಡಿ ಯನ್ ಅಂಡರ್ ಪಾಸ್ ಸೇರಿದಂತೆ ವಿವಿಧ ಅಂಡರ್ ಪಾಸ್, ಫ್ಲೈಓವರ್ ಮೇಲೆ ನೀರು ನಿಂತ ಟ್ರಾಫಿಕ್ ಸಮಸ್ಯೆ ಉಂಟಾಯಿತು. ಸೋಮವಾರ ತಡ ರಾತ್ರಿ ಸುರಿದ ಮಳೆಗೆ ಜೋಗುಪಾಳ್ಯ, ಸುಬ್ರಹ್ಮಣ್ಯಪುರ ಹಾಗೂ ವಿವೇಕನಗರದಲ್ಲಿ ತಲಾ ಒಂದು ಮರ ಧರೆಗುರುಳಿದ್ದು, ವಿವೇಕ ನಗರದಲ್ಲಿ ಒಂದು ಕಾರು ಮತ್ತು ಬೈಕ್ ಜಖಂಗೊಂಡಿವೆ ಎಂದು ಬಿಬಿಎಂಪಿ ಸಹಾಯವಾಣಿ ಕೇಂದ್ರದ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

ಅನರ್ಹ ಶಾಸಕರಿಗೆ ಈಗ ಹೊಸ ಆತಂಕ..!

ಕೆ.ಆರ್.ಪುರದಲ್ಲಿ 31.5 ಮಿ.ಮೀ. ಮಳೆ:

ಮಂಗಳವಾರ ಕೆ.ಆರ್.ಪುರದಲ್ಲಿ 31.5 ಅತಿ ಹೆಚ್ಚು ಮಿ.ಮೀ ಮಳೆಯಾದ ವರದಿಯಾಗಿದೆ. ದೊಡ್ಡಜಾಲ 22.5, ರಾಮಮೂರ್ತಿ ನಗರ 19, ಹುಸ್ಕೂರು 11.5, ಬಾಣಸವಾಡಿ 9, ಸಂಪಂಗಿರಾಮನಗರ , ದಾಸನಪುರ, ವರ್ತೂರಿನಲ್ಲಿ ತಲಾ 8.5, ಯಲಹಂಕ 8, ಬೂದಿಗೆರೆ 5, ಹೆಸರಘಟ್ಟ ಹಾಗೂ ರಾಜಾನುಕುಂಟೆಯಲ್ಲಿ ತಲಾ 3.5, ಆವಲಹಳ್ಳಿ 3 ಹಾಗೂ ಕೋನೇನ ಅಗ್ರಹಾರದಲ್ಲಿ ತಲಾ 2 ಮಿ.ಮೀ ಮಳೆಯಾಗಿದೆ.

ಇಂದಿರಾ ಕ್ಯಾಂಟೀನ್ ಭವಿಷ್ಯ ಬಿಎಸ್‌ವೈ ಕೈಯಲ್ಲಿ..!