Asianet Suvarna News Asianet Suvarna News

2​ - 3 ದಿನ ಭಾರಿ ಮಳೆ ಸಾಧ್ಯತೆ : ಎಲ್ಲೆಲ್ಲಿ..?

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯಗಳ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ ಎರಡು-ಮೂರು ದಿನ ಮಳೆಯಾಗುವ ಸಾಧ್ಯತೆಗಳಿವೆ. 

Heavy Rain Lashes In Next 2 3 Days In Karnataka
Author
Bengaluru, First Published Oct 9, 2018, 9:09 AM IST

ಬೆಂಗಳೂರು :  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ.

ವಾಯುಭಾರ ಕುಸಿತದಿಂದ ರಾಜ್ಯಗಳ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಮುಂದಿನ ಎರಡು-ಮೂರು ದಿನ ಮಳೆಯಾಗುವ ಸಾಧ್ಯತೆಗಳಿವೆ. 

ಇನ್ನು ಕೆಲವೆಡೆ ಭಾರೀ ಮಳೆಯಾಗುವ ಲಕ್ಷಣಗಳಿವೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ ಸೇರಿದಂತೆ ಸೋಮವಾರ ವಿವಿಧ ಜಿಲ್ಲೆಗಳಲ್ಲಿ ಮಳೆಯಾದ ವರದಿಯಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ನಿರ್ದೇಶಕ ಶ್ರೀನಿವಾಸ್‌ ರೆಡ್ಡಿ ತಿಳಿಸಿದ್ದಾರೆ.

ವಾಯುಭಾರ ಕುಸಿತದ ಪ್ರಭಾವ ಸಮುದ್ರದ ಮೇಲೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಲೆಗಳ ಅಬ್ಬರ ಹೆಚ್ಚಾಗಲಿದ್ದು, ಕರಾವಳಿ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮುನ್ನಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಸೋಮವಾರ ರಾತ್ರಿ ವೇಳೆ ಉಡುಪಿಯಲ್ಲಿ ಅತಿ ಹೆಚ್ಚು 96 ಮಿ.ಮೀ. ಮಳೆಯಾದ ವರದಿಯಾಗಿದೆ. ದಕ್ಷಿಣ ಕನ್ನಡ 86, ಬೆಂಗಳೂರು ಗ್ರಾಮಾಂತರ 64, ಮಂಡ್ಯ 58, ಕೊಡಗು 50.5 ಚಾಮರಾಜನಗರ 47.5. ಬೆಂಗಳೂರು ನಗರ 46, ಮೈಸೂರು 44.5, ಹಾಸನ 17, ರಾಯಚೂರು 16, ತುಮಕೂರು 15, ಶಿವಮೊಗ್ಗ 5.5 ಮಿ.ಮೀ ಮಳೆಯಾದ ವರದಿಯಾಗಿದೆ.

Follow Us:
Download App:
  • android
  • ios