ಬೆಂಗಳೂರು, (ಸೆ.17): ಅಗತ್ಯಕ್ಕಿಂತ ಕಡಿಮೆ ಪ್ರಮಾಣದಲ್ಲಿ ಸುರಿದ ಮಳೆಯಿಂದ ಕಂಗಾಲಾಗಿದ್ದ ರೈತರಿಗೆ ರಾಜ್ಯ ಹವಮಾನ ಇಲಾಖೆ ಸಂತಸದ ಸುದ್ದಿಯೊಂದು ನೀಡಿದೆ. ಮುಂದಿನ 2 ತಿಂಗಳ ಕಾಲ ಭಾರೀ ಪ್ರಮಾಣದಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅಕ್ಟೋಬರ್‌ನಲ್ಲಿ ರಾಜ್ಯದಲ್ಲಿ ವಿಪರೀತ ಮಳೆಯಾಗಲಿದ್ದು, 15 ದಿನಗಳ ಮುಂಚಿತವಾಗಿಯೇ ರಾಜ್ಯಕ್ಕೆ ಹಿಂಗಾರು ಮಳೆ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ನಿರ್ದೇಕ, ವಿಜ್ಞಾನಿ ಚನ್ನಬಸವ ಹೇಳಿದ್ದಾರೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ದಕ್ಷಿಣ ಭಾಗದಲ್ಲಿ ಈಗಾಗಲೇ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಇನ್ನೂ 4 ದಿನ ವರುಣ ಅಬ್ಬರಿಸಲಿದ್ದು, ಮುಂದಿನ ದಿನಗಳಲ್ಲಿ ಬೀದರ್, ಬಿಜಾಪುರ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಭಾರೀ ಮಳೆ ಆಗಲಿದೆ ಎಂದು ಚನ್ನಬಸವ ಅವರು ಸುವರ್ಣನ್ಯೂಸ್‌ ಗೆ ಮಾಹಿತಿ ನೀಡಿದ್ದಾರೆ.

 ಬೆಳೆದ ಬೆಳೆಗೆ ಸರಿಯಾದ ಸಮಯಕ್ಕೆ ಮಳೆ ಇಲ್ಲದೆ ಮುಂಗಾರು ಕುಂಠಿತಗೊಂಡಿದ್ದರಿಂದ ಉತ್ತರ ಕರ್ನಾಟಕ ಭಾಗದ ಜನ ಕಂಗಾಲಿದ್ದಾರೆ. ಮುಂಗಾರು ಕೈತಪ್ಪಿದರೂ ಹಿಂಗಾರು ಕೈಹಿಡಿಯುತ್ತಾ ಎನ್ನುವುದನ್ನ ಕಾದುನೋಡಬೇಕಿದೆ.