ಮುಂದಿನ ಎರಡು ದಿನ ವ್ಯಾಪಕವಾದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಬೆಂಗಳೂರು [ಆ.22]: ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕವಾದ ಮಳೆಯಾಗುವ ಸಾಧ್ಯತೆ ಇದ್ದು, ಬರುವ ದಿನಗಳಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದರೂ ಮೋಡ ಕವಿದ ವಾತಾವರಣ ಮುಂದುವರೆದಿದೆ. ಇನ್ನು ಎರಡು ದಿನ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗಲಿದೆ.

ಮಳೆಗೆ ಸಂಬಂಧಿಸಿದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಉಳಿದಂತೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ವ್ಯಾಪಕ ಮಳೆಯಾಗಲಿದೆ. ಸದ್ಯಕ್ಕೆ ಮೋಡ ಕವಿದ ವಾತಾವರಣವಿದ್ದರೂ ಬರುವ ದಿನಗಳಲ್ಲಿ ಮಳೆಯ ಮಾರುತಗಳ ಸಂಖ್ಯೆ ಕಡಿಮೆಯಾಗಲಿದ್ದು, ಮಳೆಯ ಪ್ರಮಾಣವೂ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.